ಚಿತ್ರದುರ್ಗ, ಬೆಳಗಾವಿಯಲ್ಲಿ ಭಾರೀ ಮಳೆ: ಇಂದು ಶಾಲಾ-ಕಾಲೇಜುಗಳಿಗೆ ರಜೆ!

ಬೆಳಗಾವಿಯ 5 ತಾಲೂಕುಗಳಲ್ಲಿ ಶಾಲಾ-ಕಾಲೇಜು ರಜೆ!

Untitled design 2025 08 18t105858.312

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಾದ್ಯಂತ ನಿರಂತರ ಭಾರೀ ಮಳೆಯಿಂದಾಗಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಇಂದು (ಆಗಸ್ಟ್ 18 ) ರಜೆ ಘೋಷಿಸಲಾಗಿದೆ.

ಈ ಕುರಿತು ಅಪರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ರಜೆಯಿಂದಾಗಿ ತಪ್ಪಿದ ತರಗತಿಗಳನ್ನು ಆಗಸ್ಟ್ 23 ಮತ್ತು 30ರ ಶನಿವಾರಗಳಂದು ಪೂರ್ಣ ದಿನದ ತರಗತಿಗಳ ಮೂಲಕ ಸರಿದೂಗಿಸಲು ಸೂಚನೆ ನೀಡಲಾಗಿದೆ.

ಬೆಳಗಾವಿ: ಇದೇ ರೀತಿ, ಬೆಳಗಾವಿ ಜಿಲ್ಲೆಯಲ್ಲಿ ಕೂಡ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ರಜೆ ಘೋಷಿಸಿದ್ದಾರೆ. ಬೆಳಗಾವಿ, ಖಾನಾಪುರ, ಬೈಲಹೊಂಗಲ, ಕಿತ್ತೂರು ಮತ್ತು ಸವದತ್ತಿ ತಾಲೂಕುಗಳಲ್ಲಿ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಿನಾಂಕ ಇಂದು (ಆಗಸ್ಟ್ 18 ) ರಜೆ ಘೋಷಿಸಲಾಗಿದೆ. ಜಿಲ್ಲಾಡಳಿತವು ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದೆ.

ಎರಡೂ ಜಿಲ್ಲೆಗಳಲ್ಲಿ ಮಳೆಯಿಂದಾಗಿ ರಸ್ತೆ ಸಂಪರ್ಕದಲ್ಲಿ ವ್ಯತ್ಯಯವಾಗಿದ್ದು, ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಇರಲು ಸಲಹೆ ನೀಡಲಾಗಿದೆ.

Exit mobile version