ಹನುಮಂತಪ್ಪ ನಿಧನ: ಅಂತಿಮ ದರ್ಶನಕ್ಕೆ ಚಿತ್ರದುರ್ಗಕ್ಕೆ ಆಗಮಿಸಿದ ಸಿಎಂ ಡಿಕೆಶಿ

Untitled design (35)

ಚಿತ್ರದುರ್ಗ (ಜುಲೈ 13): ರಾಜ್ಯಸಭೆಯ ಮಾಜಿ ಸದಸ್ಯರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಬಹುಮುಖ ಪ್ರತಿಭೆ ಹೆಚ್.ಹನುಮಂತಪ್ಪ (H. Hanumanthappa) ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ನಿನ್ನೆ ಭಾನುವಾರ ರಾತ್ರಿ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 95 ವರ್ಷ ವಯಸ್ಸಾಗಿತ್ತು.

ಹೆಚ್. ಹನುಮಂತಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚಿತ್ರದುರ್ಗಕ್ಕೆ ಆಗಮಿಸಿದರು.

ಚಿತ್ರದುರ್ಗ ನಗರದ ಎಸ್‌ಜೆಎಂ ಹೆಲಿಪ್ಯಾಡ್ಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಡಿ.ಕೆ. ಶಿವಕುಮಾರ್, ಅಲ್ಲಿಂದ ನೇರವಾಗಿ ಮುರುಘಾ ರಾಜೇಂದ್ರ ಕ್ರೀಡಾಂಗಣಕ್ಕೆ ತೆರಳಿದರು. ಬಳಿಕ ನಗರದ ಸೈನ್ಸ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗಿರುವ ಹೆಚ್. ಹನುಮಂತಪ್ಪ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲಿದ್ದಾರೆ.

ಹಿರಿಯ ಕಾಂಗ್ರೆಸ್ ಮುಖಂಡರಾಗಿದ್ದ ಹೆಚ್. ಹನುಮಂತಪ್ಪ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದು, ಅವರ ಅಗಲಿಕೆ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ರಾಜ್ಯ ರಾಜಕೀಯಕ್ಕೆ ಅಪಾರ ನಷ್ಟವಾಗಿದೆ.

ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಶಾಸಕ ಎನ್.ವೈ. ಗೋಪಾಲಕೃಷ್ಣ, ಕಾಂಗ್ರೆಸ್ ಮುಖಂಡರಾದ ವೀರೇಂದ್ರ ಪಪ್ಪಿ ಹಾಗೂ ಟಿ. ರಘುಮೂರ್ತಿ ಸೇರಿದಂತೆ ಹಲವು ನಾಯಕರು ಡಿ.ಕೆ. ಶಿವಕುಮಾರ್ ಅವರಿಗೆ ಸಾಥ್ ನೀಡಿದರು.

ರಾಜಕೀಯ, ಸಾಮಾಜಿಕ ಹಾಗೂ ಸಾರ್ವಜನಿಕ ವಲಯದ ಅನೇಕ ಗಣ್ಯರು ಹೆಚ್. ಹನುಮಂತಪ್ಪ ಅವರಿಗೆ ಅಂತಿಮ ನಮನ ಸಲ್ಲಿಸಲು ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದು, ಅಂತ್ಯಕ್ರಿಯೆಗೆ ಅಗತ್ಯ ಸಿದ್ಧತೆಗಳನ್ನು ಜಿಲ್ಲಾಡಳಿತ ಕೈಗೊಂಡಿದೆ.

ಕಾಂಗ್ರೆಸ್ ಪಕ್ಷದ ಹಲವು ಹಿರಿಯ ನಾಯಕರು, ಸಚಿವರು ಮತ್ತು ಮಾಜಿ ಸಂಸದರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಭಾರತ ಸೇವಾದಳ ಚಟುವಟಿಕೆಗಳ ಮೂಲಕ ಸಮಾಜಸೇವೆ ಆರಂಭಿಸಿದ ಹನುಮಂತಪ್ಪ ಅವರು, ಕ್ರಮೇಣ ರಾಜಕಾರಣಕ್ಕೆ ಪ್ರವೇಶಿಸಿದರು. ಅವರು 1982-19881988-1994 ಮತ್ತು 1994-2000 ಸೇರಿದಂತೆ ಸತತ ಮೂರು ಅವಧಿಗೆ ರಾಜ್ಯಸಭಾ ಸದಸ್ಯರಾಗಿ (Rajya Sabha Member) ಸೇವೆ ಸಲ್ಲಿಸಿದ್ದರು. ಇಂದಿರಾ ಗಾಂಧಿ ಅವರ ಕಾಲದಿಂದ ಮನಮೋಹನ್ ಸಿಂಗ್ ಅವರ ಕಾಲದವರೆಗೆ ಅವರು ಪ್ರಭಾವಿ ನಾಯಕರಾಗಿ ಮುಂದುವರೆದಿದ್ದರು.

Exit mobile version