ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್ ಭೇಟಿ ಕೊಟ್ಟ ಸಿಎಂ: ವೈದ್ಯರು-ಸಿಬ್ಬಂದಿಗಳೇ ಶಾಕ್!

Untitled design (59)

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದು, ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ಕ್ಷಣಕಾಲ ಆಶ್ಚರ್ಯಚಕಿತರಾದ ಘಟನೆ ನಡೆದಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರೊಂದಿಗೆ ಸಿಎಂ ಆಸ್ಪತ್ರೆಗೆ ಆಗಮಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಆಸ್ಪತ್ರೆಯ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿ, ಚಿಕಿತ್ಸಾ ಸೌಲಭ್ಯಗಳನ್ನು ಖುದ್ದಾಗಿ ಪರಿಶೀಲಿಸಿದರು. ರೋಗಿಗಳೊಂದಿಗೆ ಸಂವಾದ ನಡೆಸಿ, ಆಸ್ಪತ್ರೆಯ ಸಮಸ್ಯೆಗಳು ಮತ್ತು ಚಿಕಿತ್ಸಾ ವ್ಯವಸ್ಥೆಯ ಬಗ್ಗೆ ಮಾಹಿತಿ ಸಂಗ್ರಹಿಸಿದರು. ವೈದ್ಯಕೀಯ ಸಿಬ್ಬಂದಿಗಳ ಕಾರ್ಯನಿರ್ವಹಣೆ ಮತ್ತು ಆಸ್ಪತ್ರೆಯ ಒಟ್ಟಾರೆ ವ್ಯವಸ್ಥೆಯನ್ನು ಅವಲೋಕಿಸಿದರು.

ಈ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು. ಆಸ್ಪತ್ರೆಯ ಸೌಲಭ್ಯಗಳನ್ನು ಸುಧಾರಿಸುವ ಕುರಿತು ಮುಖ್ಯಮಂತ್ರಿಗಳು ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

Exit mobile version