ಪತ್ನಿಯ ಪ್ರಿಯಕರನನ್ನು ಕೊಲೆಗೈದ ವ್ಯಕ್ತಿಯನ್ನು ಕೊಲೆಯಾದ ಒಂದೇ ಗಂಟೆಯಲ್ಲಿ ದಾವಣಗೆರೆ ಪೊಲೀಸ್ ಇಲಾಖೆಯ ಕ್ರೈಂ ಡಾಗ್ (Crime Dog) ತಾರಾ ಪತ್ತೆ ಹಚ್ಚಿರುವ ಘಟನೆ ಹೊನ್ನೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹೆಗಡೆಹಾಳ್ ಗ್ರಾಮದ ಶಿವಕುಮಾರ್(28) ಕೊಲೆಯಾದ ಯುವಕ. ಹೊನ್ನೂರು ಗೊಲ್ಲರಹಟ್ಟಿಯ ಜಯ್ಯಪ್ಪ ಕೊಲೆ ಮಾಡಿದ ಆರೋಪಿಯಾಗಿದ್ದಾರೆ.
ಹೌದು ಶಿವಕುಮಾರ್, ಜಯ್ಯಪ್ಪನ ಪತ್ನಿ ಪರಿಮಳರನ್ನು ಪ್ರೀತಿಸುತ್ತಿದ್ದ ಎಂದು ತಿಳಿದು ಬಂದಿದೆ. ಮದುವೆಯಾದ ನಂತರವೂ ಕೂಡ ಪರಿಮಳ ಹಾಗೂ ಶಿವಕುಮಾರ್ ಸಂಬಂಧ ಹೊಂದಿದ್ದರು. ಶಿವಕುಮಾರ್ ಪರಿಮಳರನ್ನು ಭೇಟಿಯಾಗಲು ಹೊನ್ನೂರು ಗೊಲ್ಲರಹಟ್ಟಿ ಬಳಿ ಇರುವ ಜಮೀನಿಗೆ ಬಂದಿದ್ದ. ಇಬ್ಬರು ಜೊತೆಗಿದ್ದದ್ದು ಕಂಡು ಕೋಪಗೊಂಡ ಜಯ್ಯಪ್ಪ, ಶಿವಕುಮಾರ್ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ.
ಕೂಡಲೇ ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಕ್ರೈಂ ಡಾಗ್ ತಾರಾ ಆರೋಪಿಯ ಜಾಡು ಹಿಡಿದು ಹೊರಟಿತ್ತು. ಕೊಲೆ ಆರೋಪಿ ಮನೆ ಮುಂದೆ ನಿಂತ ಕ್ರೈಂ ಡಾಗ್ ತಾರಾ, ಕೊಲೆಯಾದ ಒಂದು ಗಂಟೆಯಲ್ಲೇ ಆರೋಪಿಯನ್ನು ಪತ್ತೆ ಮಾಡಿದೆ.
ಈ ವಿಚಾರವಾಗಿ ಕೂಡಲೇ ಪತ್ನಿಯನ್ನು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ಭೇದಿಸಿದ ಕ್ರೈಂ ಡಾಗ್ ತಾರಾ ಹಾಗೂ ಗ್ರಾಮಾಂತರ ಠಾಣೆ ಪೊಲೀಸರ ಕಾರ್ಯಕ್ಕೆ ಎಸ್ ಪಿ ಉಮಾ ಪ್ರಶಾಂತ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
- Tata Play-1665
- U-Digital-ಮೈಸೂರು-160
- Metro Cast Network-ಬೆಂಗಳೂರು-ಬೆಳಗಾವಿ-30-828
- V4 digital network-623
- Abhishek network-817
- Malnad Digital network-45
- JBM network-ರಾಮದುರ್ಗ-54
- Channel net nine-ಧಾರವಾಡ-128
- Basava cable network-ಚಳ್ಳಕೆರೆ-54
- City channel network– ಚಳ್ಳಕೆರೆ-54
- RST digital-ಕಾರ್ಕಳ-101
- Vinayak cable-ಪಟ್ಟನಾಯಕನಹಳ್ಳಿ-54
- Mubarak digital-ಸಂಡೂರು-54
- SB cable-ಸವದತ್ತಿ-54
- Bhosale network-ವಿಜಯಪುರ-54
- Surya digital-ಜಗಳೂರು-54
- Gayatri network-ಸಿಂಧನೂರು-54
- Global vision-ದಾವಣಗೆರೆ-54
- Janani cable-ಮಂಡ್ಯ-54
- Hira cable-ಬೆಳಗಾವಿ-ಹುಬ್ಬಳ್ಳಿ-54
- UDC network-ಹಾರೋಗೇರಿ-54
- Moka cable-ಬಳ್ಳಾರಿ-100
- CAN network-ಚಿಕ್ಕೋಡಿ-54
- KK digital-ಗಂಗಾವತಿ-54
- Victory network-ದಾವಣಗೆರೆ-54