ನಾಗರ ಪಂಚಮಿ ಹಿನ್ನೆಲೆ ದ.ಕ ಜಿಲ್ಲೆ ಶಾಲೆ-ಕಾಲೇಜುಗಳಿಗೆ ರಜೆ

Create social media poster by using above mentioned text in 18001800 Pixels

ಮಂಗಳೂರು ಆ. 16:  ಹಿಂದೂ ಸಂಸ್ಕೃತಿಯಲ್ಲಿ ಶ್ರಾವಣ ಮಾಸದ ಮೊದಲ ಮಹತ್ವದ ಹಬ್ಬಗಳಲ್ಲಿ ಒಂದಾದ ನಾಗರ ಪಂಚಮಿಯನ್ನು ಈ ವರ್ಷ ಆಗಸ್ಟ್ 17, 2026 (ಸೋಮವಾರ) ಅಂದರೆ ನಾಳೆ ಆಚರಿಸಲಾಗುತ್ತದೆ. ನಾಗದೇವತೆಯ ಆರಾಧನೆ, ಪ್ರಕೃತಿ ಸಂರಕ್ಷಣೆ ಹಾಗೂ ಸಹೋದರ–ಸಹೋದರಿಯರ ಬಾಂಧವ್ಯವನ್ನು ಪ್ರತಿಬಿಂಬಿಸುವ ಈ ಪವಿತ್ರ ಹಬ್ಬಕ್ಕೆ ವಿಶೇಷ ಧಾರ್ಮಿಕ ಮಹತ್ವವಿದೆ.

ನಾಗರ ಪಂಚಮಿ ಹಬ್ಬದ ಹಿನ್ನೆಲೆಯಲ್ಲಿ ನಾಳೆ ಸೋಮವಾರ ಆಗಸ್ಟ್ 17ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ರಜೆ ಘೋಷಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಆದೇಶ ಹೊರಡಿಸಿದ್ದು, ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ.

ಜಿಲ್ಲೆಯಲ್ಲಿ ನಾಗರ ಪಂಚಮಿಯನ್ನು ಪ್ರತಿಯೊಂದು ಕುಟುಂಬವೂ ಸಂಪ್ರದಾಯಬದ್ಧವಾಗಿ ಆಚರಿಸುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ರಜೆ ನೀಡುವಂತೆ ಆಗ್ರಹ ವ್ಯಕ್ತವಾಗಿತ್ತು. ಈ ಕುರಿತು ಶಾಸಕ ವೇದವ್ಯಾಸ ಕಾಮತ್ ಕೂಡ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದರು.

ಸಂಪ್ರದಾಯದ ಮಹತ್ವ

ಹಿಂದೂ ಧರ್ಮದಲ್ಲಿ ಶ್ರಾವಣ ಮಾಸದ ಶುಕ್ಲ ಪಂಚಮಿಯಂದು ಆಚರಿಸಲಾಗುವ ನಾಗರ ಪಂಚಮಿ ಅತ್ಯಂತ ಪವಿತ್ರ ಹಬ್ಬವಾಗಿದೆ. ಈ ದಿನ ನಾಗ ದೇವತೆಯನ್ನು ಭಕ್ತಿ, ಕೃತಜ್ಞತೆ ಹಾಗೂ ಶ್ರದ್ಧೆಯಿಂದ ಪೂಜಿಸುವ ಸಂಪ್ರದಾಯ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ದಕ್ಷಿಣ ಕನ್ನಡದಲ್ಲಿ ಕುಟುಂಬಗಳ ಮೂಲಸ್ಥಾನಗಳಲ್ಲಿ ವಿಶೇಷ ಪೂಜೆ, ನಾಗಮಂಡಲ ಹಾಗೂ ಧಾರ್ಮಿಕ ಆಚರಣೆಗಳು ನಡೆಯುವುದು ಈ ಹಬ್ಬದ ವೈಶಿಷ್ಟ್ಯವಾಗಿದೆ.

ಭಕ್ತರ ನಂಬಿಕೆಯಂತೆ, ಈ ದಿನ ನಾಗದೇವತೆಯನ್ನು ಆರಾಧಿಸುವುದರಿಂದ ಕಾಳಸರ್ಪ ದೋಷರಾಹು–ಕೇತು ದೋಷ ನಿವಾರಣೆಯಾಗುತ್ತದೆ. ಕುಟುಂಬದಲ್ಲಿ ಶಾಂತಿ, ಸಮೃದ್ಧಿ ಹಾಗೂ ಆಯುರಾರೋಗ್ಯ ನೆಲೆಸುತ್ತದೆ ಎಂಬ ವಿಶ್ವಾಸವೂ ಇದೆ.

Exit mobile version