ದಾವಣಗೆರೆ: ಚನ್ನಗಿರಿ ತಾಲೂಕಿನ ಕಾಕನೂರು ಗ್ರಾಮದಲ್ಲಿ ಐವರು ಮುಸುಕುಧಾರಿಗಳ ಗುಂಪೊಂದು ವೃದ್ಧ ದಂಪತಿಯ ಕೈಕಾಲು ಕಟ್ಟಿ, 8.40 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ದರೋಡೆ ಮಾಡಿರುವ ಘಟನೆ ನಡೆದಿದೆ.
ಗ್ರಾಮದ ಸಾವಿತ್ರಮ್ಮ (60) ಮತ್ತು ಮಾದಪ್ಪ (62) ಎಂಬ ದಂಪತಿಯ ಮೇಲೆ ದರೋಡೆಕೋರರು ದಾಳಿ ನಡೆಸಿದ್ದಾರೆ. ದರೋಡೆಕೋರರು ದಂಪತಿಯ ಮೇಲೆ ಹಲ್ಲೆ ನಡೆಸಿ, ಅವರ ಕೈಕಾಲುಗಳನ್ನು ಕಟ್ಟಿ, ಮನೆಯಲ್ಲಿದ್ದ ಚಿನ್ನಾಭರಣವನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ.
ಘಟನೆಯ ಸ್ಥಳಕ್ಕೆ ಸಂತೆಬೆನ್ನೂರು ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ದರೋಡೆಕೋರರನ್ನು ಬಂಧಿಸಲು ದಾವಣಗೆರೆ ಜಿಲ್ಲಾ ಪೊಲೀಸ್ ಮುಖ್ಯಸ್ಥ ಉಮಾ ಪ್ರಶಾಂತ್ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದೆ.
