ದಾವಣಗೆರೆ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ: ರೈತರಲ್ಲಿ ಭಯದ ವಾತಾವರಣ

Untitled design (4)

ದಾವಣಗೆರೆ ಆಗಸ್ಟ್ 13:  ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳು ನಾಡಿನತ್ತ ಬರುತ್ತಿರುವುದು ಸಾಮಾನ್ಯವಾಗಿದೆ. ಹುಲಿ ಚಿರತೆ ಆನೆಗಳು ಜನಬಿಡದಿಯತ್ತ ಲಗ್ಗೆ ಇಡುವುದರಿಂದ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಇಂತಹ ಪ್ರಾಣಿಗಳು ಜನರ ಮೇಲೆ ದಾಳಿಯನ್ನು ಕಾಡಾ ನಡೆಸುತ್ತಿದೆ. ಇದೀಗ ದಾವಣಗೆರೆ ತಾಲೂಕಿನ ಹಾಲವರ್ತಿ ಗ್ರಾಮದ ಕೃಷಿ ಜಮೀನಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ರೈತರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಜಮೀನಿಗೆ ಕೆಲಸಕ್ಕೆ ತೆರಳಿದ್ದ ರೈತನಿಗೆ ಚಿರತೆ ಪ್ರತ್ಯಕ್ಷವಾಗಿದ್ದು, ಆತ ಸುರಕ್ಷಿತ ಅಂತರದಿಂದ ಅದರ ಫೋಟೋವನ್ನು ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾನೆ.

ಚಿರತೆ ಜಮೀನಿನಲ್ಲಿ ಓಡಾಡುತ್ತಿರುವ ಚಿತ್ರಗಳು ಗ್ರಾಮದಲ್ಲಿ ವೈರಲ್ ಆಗಿದ್ದು, ಸುತ್ತಮುತ್ತಲಿನ ರೈತರು ಮತ್ತು ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಕೃಷಿ ಕೆಲಸಕ್ಕಾಗಿ ಬೆಳಗ್ಗೆ ಹಾಗೂ ಸಂಜೆ ಜಮೀನಿಗೆ ಹೋಗಲು ರೈತರು ಹಿಂಜರಿಯುತ್ತಿದ್ದಾರೆ.

ಗ್ರಾಮಸ್ಥರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿದು ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಬೇಕೆಂದು ಒತ್ತಾಯಿಸಿದ್ದಾರೆ. ಯಾವುದೇ ಅನಾಹುತ ಸಂಭವಿಸುವ ಮೊದಲು ಅಧಿಕಾರಿಗಳು ಗಸ್ತು ಹೆಚ್ಚಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ರೈತರು ಆಗ್ರಹಿಸಿದ್ದಾರೆ.

Exit mobile version