ಕಷ್ಟ ಪರಿಹರಿಸುವ ನೆಪದಲ್ಲಿ ಮನೆಗೆ ಬರ್ತಾರೆ ಕಳ್ಳರು..!

ಕಷ್ಟ ಪರಿಹರಿಸುವ ಸೋಗಿನಲ್ಲಿ ಬಂದು ಮನೆಗಳ್ಳತನ

Fದಹಗಜಹಗಜ

ದಾವಣಗೆರೆ: ಪೂಜೆ ಮಾಡಿ ಕಷ್ಟ ಪರಿಹರಿಸುವ ಸೋಗಿನಲ್ಲಿ ಬಂದು ಮನೆ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿರುವ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾ, ಬನ್ನಿಕೋಡು ಗ್ರಾಮದದಲ್ಲಿ ನಡೆದಿದೆ. ಬಂಧಿತರಿಂದ 8.65,000 ರೂ ಮೌಲ್ಯದ 90 ಗ್ರಾಂ ಚಿನ್ನದ ಆಭರಣ ಸೇರಿದಂತೆ 750 ಗ್ರಾಂ ಬೆಳ್ಳಿಯ ವಸ್ತುಗಳನ್ನ ವಶಪಡಿಸಿಕೊಳ್ಳಲಾಗಿದೆ.

ದಾವಣಗೆರೆ ಜಿಲ್ಲೆ ಹರಿಹರ ತಾ, ಬನ್ನಿಕೋಡು ಗ್ರಾಮದ ಶಶಿಕಲಾ ಎಂಬುವರ ಮನೆಯಲ್ಲಿ ಹಣಕಾಸಿನ ಸಮಸ್ಯೆ ಪರಿಹಾರ ಮಾಡಲು ಪೂಜೆ ಮಾಡುತ್ತೇವೆ ಎಂದು ಹೇಳಿಕೊಂಡು ಇಬ್ಬರು ವ್ಯಕ್ತಿಗಳು ಮನೆಗೆ ಬಂದಿದ್ದರು. ಇಸ್ಮಾಯಿಲ್ ಜಬೀವುಲ್ಲಾ ಮತ್ತು ರುಕ್ಸಾನ ಬೇಗಂ ಎಂಬುವರು ಇದೆ ತಿಂಗಳ 11ರಂದು ರಂದು ಮನೆಗೆ ಬಂದು, ಮನೆಯಲ್ಲಿದ್ದ ಆಭರಣ ಪೂಜೆ ಮಾಡಿಸಿಕೊಡುವುದಾಗಿ ನಂಬಿಸಿ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.

ಈ ಸಂಬಂಧ ಹರಿಹರ ಗ್ರಾಮಾಂತರ ಠಾಣಾ ಪೊಲೀಸರು ದೂರು ದಾಖಲಿಸಿಕೊಂಡು ಆರೋಪಿಗಳಾದ ಇಸ್ಮಾಯಿಲ್ ಜಬೀವುಲ್ಲಾ ಹಾಗೂ ರುಕ್ಸಾನ ಬೇಗಂ ಅವರನ್ನ ಬಂಧಿಸಿದ್ದು,  ನೊಂದ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲಾಗಿದೆ. ಇನ್ನೂ ಹರಿಹರ ಗ್ರಾಮಾಂತರ ಠಾಣಾ ಪೊಲೀಸರ ಕಾರ್ಯಚರಣೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಶ್ಲಾಘಿಸಿದ್ದಾರೆ.

Exit mobile version