• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, November 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ದೇವಿರಮ್ಮ ಬೆಟ್ಟದಲ್ಲಿ ಅವಘಡ: ಹೃದಯಾಘಾತಕ್ಕೆ ಓರ್ವ ಸಾವು, ಕಂಬಿ ಮುರಿದು 20ಕ್ಕೂ ಹೆಚ್ಚು ಭಕ್ತರಿಗೆ ಗಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 8, 2026 - 4:12 pm
in ಕರ್ನಾಟಕ, ಚಿಕ್ಕಮಗಳೂರು, ಜಿಲ್ಲಾ ಸುದ್ದಿಗಳು
0 0
0
ಏರಿಕೆ (1)

ಚಿಕ್ಕಮಗಳೂರು: ದೀಪಾವಳಿ ಹಬ್ಬದ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯ ಬಿಂಡಿಗ ದೇವಿರಮ್ಮ ಬೆಟ್ಟದಲ್ಲಿ ಭಕ್ತರ ದಂಡೇ ಹರಿದುಬಂದಿದೆ. ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ದೇವಿರಮ್ಮನ ಆಶೀರ್ವಾದ ಪಡೆಯಲು ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ಆದರೆ, ಭಕ್ತರ ನಿರೀಕ್ಷೆಗೂ ಮೀರಿದ ಜನಸಂದಣಿಯಿಂದ ಬೆಟ್ಟದಲ್ಲಿ ಸರಣಿ ಅವಘಡಗಳು ಸಂಭವಿಸಿದ್ದು, 20ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ. ಮತ್ತೊಂದೆಡೆ, ಬೆಟ್ಟ ಹತ್ತುವಾಗ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ದೇವಿರಮ್ಮ ಬೆಟ್ಟದಲ್ಲಿ ಭಕ್ತರ ಸುರಕ್ಷತೆಗಾಗಿ ಅಳವಡಿಸಲಾಗಿದ್ದ ಕಂಬಿ ಮುರಿದುಬಿದ್ದ ಪರಿಣಾಮ ಓರ್ವ ಬಾಲಕ ಸೇರಿದಂತೆ 20ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಕೆಲವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಬೆಟ್ಟದಿಂದ ಗಾಯಾಳುಗಳನ್ನು ಹೊತ್ತು ತಂದು ಆಂಬ್ಯುಲೆನ್ಸ್‌ ಮೂಲಕ ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

RelatedPosts

ಹಾಸನ ಡಿಸಿ, ಸಚಿವ ಶಿವಲಿಂಗೇಗೌಡ ವಿರುದ್ಧ ಲಂಚದ ಆರೋಪ: ಹೆಚ್‌‌ಡಿಕೆ ಹೊಸ ಬಾಂಬ್‌‌

ಕುಟುಂಬ ಸಮೇತ ಹಾಸನಾಂಬೆ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್‌

ಏಳು ಮಂದಿ ಹ*ತ್ಯೆ ಕೇಸ್‌: ಕೊ*ಲೆಗೂ ಮುನ್ನ ಕ್ರೈಂ ಥ್ರಿಲ್ಲರ್‌ ಸಿನಿಮಾ ನೋಡಿದ್ದ ಆರೋಪಿ

ಪೆಟ್ರೋಲ್‌‌ನಲ್ಲಿ ಎಥೆನಾಲ್ ಮಿಶ್ರಣ; 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿ.ಕೆ ಶಿವಕುಮಾರ್

ADVERTISEMENT
ADVERTISEMENT
ನೂಕಾಟದಲ್ಲಿ ಕೇಬಲ್ ತುಂಡಾಗಿ ಅವಘಡ

ದೇವಿರಮ್ಮ ಬೆಟ್ಟದಲ್ಲಿ ಭಕ್ತರ ಸಂಖ್ಯೆ ಹೆಚ್ಚಾದ ಹಿನ್ನೆಲೆ ನೂಕಾಟ ಉಂಟಾಗಿದೆ. ಈ ವೇಳೆ ಬೆಟ್ಟದಲ್ಲಿ ಅಳವಡಿಸಲಾಗಿದ್ದ ಕೇಬಲ್ ತುಂಡಾಗಿ ಓರ್ವ ಬಾಲಕಿ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ಬಾಲಕಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ದಯಾಮಾ, ಭಕ್ತರ ಸಂಖ್ಯೆ ಹೆಚ್ಚಾದ ಹಿನ್ನೆಲೆ ಉಂಟಾದ ನೂಕಾಟದ ವೇಳೆ ಕೇಬಲ್ ತುಂಡಾಗಿದೆ ಎಂದು ತಿಳಿಸಿದ್ದಾರೆ. ಗಾಯಾಳುಗಳಿಗೆ ತಕ್ಷಣ ನೆರವು ಒದಗಿಸುವ ಕಾರ್ಯ ಕೈಗೊಳ್ಳಲಾಗಿದೆ. ಬೆಟ್ಟದಲ್ಲಿ ಭಕ್ತರ ಸುರಕ್ಷತೆ ಮತ್ತು ಜನದಟ್ಟಣೆ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಬೆಟ್ಟ ಹತ್ತುವಾಗ ಹೃದಯಾಘಾತ: ವ್ಯಕ್ತಿ ಸಾವು

ದೇವಿರಮ್ಮ ಬೆಟ್ಟದಲ್ಲಿ ಸಂಭವಿಸಿದ ಮತ್ತೊಂದು ದುರಂತದಲ್ಲಿ ಬೆಟ್ಟ ಹತ್ತುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಲಕ್ಷ್ಮಣ್‌ (35) ಮೃತ ದುರ್ದೈವಿ. ಈ ಹಿಂದೆ ಅವರಿಗೆ ಹೃದಯಾಘಾತವಾಗಿದ್ದು, ಬೈಪಾಸ್ ಶಸ್ತ್ರಚಿಕಿತ್ಸೆಯನ್ನೂ ಮಾಡಿಸಿಕೊಂಡಿದ್ದರು ಎನ್ನಲಾಗಿದೆ.

ದೇವಿರಮ್ಮನ ದರ್ಶನಕ್ಕಾಗಿ ಬೆಟ್ಟ ಹತ್ತುತ್ತಿದ್ದ ಸಂದರ್ಭದಲ್ಲಿ ಹವಾಮಾನ ವೈಪರೀತ್ಯದಿಂದ ಉಸಿರಾಟದ ತೊಂದರೆ ಕಾಣಿಸಿಕೊಂಡು ಲಕ್ಷ್ಮಣ್‌ ಕುಸಿದುಬಿದ್ದಿದ್ದಾರೆ. ತಕ್ಷಣವೇ ಸ್ಥಳದಲ್ಲಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಆದರೆ, ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತದೇಹವನ್ನು ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ದೇವಿರಮ್ಮ ದರ್ಶನಕ್ಕೆ ಒಂದು ಲಕ್ಷಕ್ಕೂ ಹೆಚ್ಚು ಭಕ್ತರು

ದೀಪಾವಳಿ ಹಬ್ಬದ ಸಂದರ್ಭದಲ್ಲಿ ದೇವಿರಮ್ಮ ಬೆಟ್ಟದಲ್ಲಿ ವಿಶೇಷ ಧಾರ್ಮಿಕ ಸಂಭ್ರಮ ಮನೆಮಾಡಿದೆ. ವರ್ಷಕ್ಕೊಮ್ಮೆ ಮಾತ್ರ ದೇವಿಯ ದರ್ಶನಕ್ಕೆ ಅವಕಾಶ ಇರುವುದರಿಂದ ರಾಜ್ಯದ ವಿವಿಧ ಜಿಲ್ಲೆಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ಈ ಬಾರಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.

ಇಂದು ದೇವಿರಮ್ಮನ ದರ್ಶನಕ್ಕೆ ಕೊನೆಯ ದಿನವಾಗಿರುವುದರಿಂದ ಹಿಂದಿನ ದಿನಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬೆಟ್ಟದತ್ತ ಹೆಜ್ಜೆ ಹಾಕಿದ್ದಾರೆ. ಹಸಿರು ಸಿರಿಯ ನಡುವೆ ಕಡಿದಾದ ಬೆಟ್ಟದ ಹಾದಿಯನ್ನು ಏರುತ್ತಾ ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದಾರೆ.

ಗಾಯಾಳುಗಳ ರಕ್ಷಣೆಗೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ

ಕಂಬಿ ಮುರಿತ, ಕೇಬಲ್ ತುಂಡಾಗುವಿಕೆ ಹಾಗೂ ಹೃದಯಾಘಾತದ ಘಟನೆಗಳ ಹಿನ್ನೆಲೆಯಲ್ಲಿ ಬೆಟ್ಟದಲ್ಲಿ ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಗಾಯಾಳುಗಳನ್ನು ಬೆಟ್ಟದಿಂದ ಕೆಳಕ್ಕೆ ಕರೆತಂದು ಆಸ್ಪತ್ರೆಗೆ ಸಾಗಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಏರಿಕೆ (1)

ದೇವಿರಮ್ಮ ಬೆಟ್ಟದಲ್ಲಿ ಅವಘಡ: ಹೃದಯಾಘಾತಕ್ಕೆ ಓರ್ವ ಸಾವು, ಕಂಬಿ ಮುರಿದು 20ಕ್ಕೂ ಹೆಚ್ಚು ಭಕ್ತರಿಗೆ ಗಾಯ

by ಶಾಲಿನಿ ಕೆ. ಡಿ
November 8, 2026 - 4:12 pm
0

ಏರಿಕೆ

ವೀಕೆಂಡ್‌ನಲ್ಲಿ ಗೋಲ್ಡ್‌ ಖರೀದಿಸುವವರಿಗೆ ಮತ್ತೆ ಶಾಕ್‌: ಚಿನ್ನ-ಬೆಳ್ಳಿ ಬೆಲೆ ಏರಿಕೆ

by ಶಾಲಿನಿ ಕೆ. ಡಿ
November 8, 2026 - 2:49 pm
0

Untitled Design 2026 11 08T141513.045

ಹಾಸನ ಡಿಸಿ, ಸಚಿವ ಶಿವಲಿಂಗೇಗೌಡ ವಿರುದ್ಧ ಲಂಚದ ಆರೋಪ: ಹೆಚ್‌‌ಡಿಕೆ ಹೊಸ ಬಾಂಬ್‌‌

by ಶಾಲಿನಿ ಕೆ. ಡಿ
November 8, 2026 - 2:18 pm
0

Untitled Design 2026 11 08T134433.877

ಕುಟುಂಬ ಸಮೇತ ಹಾಸನಾಂಬೆ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್‌

by ಶಾಲಿನಿ ಕೆ. ಡಿ
November 8, 2026 - 1:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 08T141513.045
    ಹಾಸನ ಡಿಸಿ, ಸಚಿವ ಶಿವಲಿಂಗೇಗೌಡ ವಿರುದ್ಧ ಲಂಚದ ಆರೋಪ: ಹೆಚ್‌‌ಡಿಕೆ ಹೊಸ ಬಾಂಬ್‌‌
    November 8, 2026 | 0
  • Untitled Design 2026 11 08T134433.877
    ಕುಟುಂಬ ಸಮೇತ ಹಾಸನಾಂಬೆ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್‌
    November 8, 2026 | 0
  • ಕ್ರೈಂ ಥ್ರಿಲ್ಲರ್
    ಏಳು ಮಂದಿ ಹ*ತ್ಯೆ ಕೇಸ್‌: ಕೊ*ಲೆಗೂ ಮುನ್ನ ಕ್ರೈಂ ಥ್ರಿಲ್ಲರ್‌ ಸಿನಿಮಾ ನೋಡಿದ್ದ ಆರೋಪಿ
    November 8, 2026 | 0
  • Untitled design 2026 11 08T125059.129
    ಪೆಟ್ರೋಲ್‌‌ನಲ್ಲಿ ಎಥೆನಾಲ್ ಮಿಶ್ರಣ; 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿ.ಕೆ ಶಿವಕುಮಾರ್
    November 8, 2026 | 0
  • Untitled Design 2026 11 08T123842.552
    ಬೆಂಗಳೂರಿನ 7 ಜನರ ಹ*ತ್ಯೆ ಕೇಸ್: 5 ಮೃತದೇಹ ಪತ್ತೆ, ಉಳಿದ 2 ಶವಗಳಿಗಾಗಿ ಮುಂದುವರೆದ ಶೋಧ
    November 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version