ಬೆಂಗಳೂರು: ಧರ್ಮಸ್ಥಳ ಕೇಸ್‌ಗೆ ಸಂಬಂಧಿಸಿದಂತೆ ಅನಾಮಿಕ ವ್ಯಕ್ತಿಯನ್ನು ತಕ್ಷಣ ಬಂಧಿಸಿ, ಈ ಆರೋಪದ ಹಿಂದಿನ ಷಡ್ಯಂತ್ರವನ್ನು ಬಯಲಿಗೆಳೆಯಬೇಕು ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ, “ಧರ್ಮಸ್ಥಳದ ಪವಿತ್ರ ಹೆಸರು ಮತ್ತು ಹೆಗ್ಗಡೆಯವರ ಗೌರವಕ್ಕೆ ಕಳಂಕ ತರುವ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಅನಾಮಿಕ ದೂರುದಾರನು ಧರ್ಮಸ್ಥಳದಲ್ಲಿ ನೂರಾರು ಹೆಣಗಳನ್ನು ಹೂತುಹಾಕಲಾಗಿದೆ ಎಂದು ಆರೋಪಿಸಿದ್ದಾನೆ.
ಆದರೆ ಈ ಆರೋಪಕ್ಕೆ ಯಾವುದೇ ಆಧಾರವಿಲ್ಲ. ಒಬ್ಬ ವ್ಯಕ್ತಿಯಿಂದ ನೂರಾರು ಹೆಣಗಳನ್ನು ಹೂಳುವುದು ಸಾಧ್ಯವೇ? ಇದರ ಹಿಂದೆ ದೊಡ್ಡ ಒಳಸಂಚು ಇದೆ. ಸರ್ಕಾರ ಈ ಅನಾಮಿಕ ವ್ಯಕ್ತಿಯನ್ನು ಶೀಘ್ರವಾಗಿ ಬಂಧಿಸಿ, ಆತನ ಹಿಂದೆ ಯಾರು ಇದ್ದಾರೆ ಎಂಬುದನ್ನು ಕಂಡುಹಿಡಿಯಬೇಕು,” ಎಂದು ಆಗ್ರಹಿಸಿದ್ದಾರೆ.