ಮಹೇಶ್ ಶೆಟ್ಟಿ ತಿಮರೋಡಿ ಉಡುಪಿ ಪೊಲೀಸರ ವಶಕ್ಕೆ!

Untitled design 2025 08 21t103334.833

ಮಂಗಳೂರು: ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಇಂದು ಬೆಳಿಗ್ಗೆ ಉಡುಪಿ ಪೊಲೀಸರು ವಶಕ್ಕೆ ಪಡೆದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸರು ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ತಿಮರೋಡಿಗೆ ನೋಟಿಸ್ ಜಾರಿ ಮಾಡಿದ್ದರು. ಆದರೆ, ಅವರು ವಿಚಾರಣೆಗೆ ಗೈರುಹಾಜರಾಗಿದ್ದರಿಂದ, ಉಡುಪಿ ಎಎಸ್‌ಪಿ ಸುಧಾಕರ್ ನಾಯಕ್ ನೇತೃತ್ವದ ಪೊಲೀಸ್ ತಂಡ ಇಂದು ಬೆಳಿಗ್ಗೆ ಉಜಿರೆಯ ತಿಮರೋಡಿಯಲ್ಲಿ ವಶಕ್ಕೆ ಪಡೆದರು.

ಏನಿದು ಪ್ರಕರಣ?

ಆಗಸ್ಟ್‌ 16ರಂದು ಫೇಸ್‌ಬುಕ್‌ ಪೇಜ್‌ನಲ್ಲಿ ಮಹೇಶ ಶೆಟ್ಟಿ ತಿಮರೋಡಿಯು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್‌ ಅವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿ ಹಿಂದೂ ಧರ್ಮದ ನಾಯಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಮಹೇಶ ಶೆಟ್ಟಿ ತಿಮರೋಡಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಗ್ರಾಮಾಂತರ ಬಿಜಿಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್ ಅವರು ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

Exit mobile version