ಬೆಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಆರೋಪದಡಿ ದೂರುದಾರ ‘ಮಾಸ್ಕ್ ಮ್ಯಾನ್’ ಚಿನ್ನಯನನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ಬಂಧಿಸಿದೆ. ಈ ಕುರಿತು ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹಸಚಿವ ಡಾ ಜಿ. ಪರಮೇಶ್ವರ್, “ಎಸ್‌ಐಟಿ ಅಧಿಕಾರಿಗಳು ಮಾಸ್ಕ್ ಮ್ಯಾನ್‌ನನ್ನು ಬಂಧಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ತನಿಖೆ ನಡೆಯುತ್ತಿದ್ದಾಗ ನಾವು ಹೇಳಿಕೆ ಕೊಡುವಂತಿಲ್ಲ. ಗೊಂದಲ ಸೃಷ್ಟಿ ಮಾಡುವಂತಿಲ್ಲ. ಇದರ ಹಿಂದೆ ಯಾವುದಾದರೂ ಜಾಲ ಇದೆಯೇ ಇಲ್ಲವೇ? ಷಡ್ಯಂತ ನಡೆದಿದೆಯೇ? ಎಂಬುದನ್ನು ಎಸ್ ಐಟಿ ತನಿಖೆ ಮೂಲಕವೇ ಬಯಲಾಗಬೇಕಿದೆ. ತನಿಖೆ ವರದಿ ಬಂದ ಬಳಿಕವೇ ಎಲ್ಲವೂ ಗೊತ್ತಾಗುತ್ತದೆ ಎಂದು ಗೃಹಸಚಿವ ಡಾ ಜಿ. ಪರಮೇಶ್ವರ್ ಹೇಳಿದ್ದಾರೆ.
