ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತುಹಾಕಲಾಗಿದೆ ಎಂದು ಆರೋಪಿಸಿದ್ದ ‘ಮಾಸ್ಕ್ ಮ್ಯಾನ್’ನನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ಸುದೀರ್ಘ ವಿಚಾರಣೆಯ ಬಳಿಕ ಬಂಧಿಸಿದೆ. ಇಂದು (ಶನಿವಾರ) ಬೆಳಿಗ್ಗೆ ಎಸ್‌ಐಟಿ ಆತನನ್ನು ಕೋರ್ಟ್‌ಗೆ ಹಾಜರುಪಡಿಸಲಿದೆ.
ಮಾಸ್ಕ್ ಮ್ಯಾನ್‌ನ ದೂರಿನ ಆಧಾರದ ಮೇಲೆ ಧರ್ಮಸ್ಥಳದ ಸುತ್ತಮುತ್ತ ಶೋಧ ಕಾರ್ಯ ನಡೆಸಲಾಗಿತ್ತು. ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಶನಿವಾರ ಬೆಳಗಿನ 5 ಗಂಟೆಯವರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಡೆದ 19 ಗಂಟೆಗಳ ವಿಚಾರಣೆಯಲ್ಲಿ ಆತನ ಆರೋಪಗಳು ಸುಳ್ಳು ಎಂದು ಸಾಬೀತಾಗಿದೆ.
ADVERTISEMENT
ADVERTISEMENT
ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮಹಾಂತಿ ನೇತೃತ್ವದಲ್ಲಿ ನಡೆದ ಈ ತನಿಖೆಯ ನಂತರ ಆತನನ್ನು ಬಂಧಿಸಲಾಗಿದೆ.