ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿರುವ ಶವಗಳನ್ನು ಹೂತು ಹಾಕಿರುವ ಆರೋಪಿತ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದ್ದು, ಈ ತಂಡವು ಮಂಗಳೂರಿನಲ್ಲಿ ಕಚೇರಿ ಮತ್ತು ಸಹಾಯವಾಣಿಯನ್ನು ಸ್ಥಾಪಿಸಿದೆ.
ಹೌದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾಧ ಸಂಖ್ಯೆ 39/2025 ಕಲಂ 311 (ಎ) ಬಿಎನ್‌ಎಸ್ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚನೆಯಾಗಿದ್ದು, ತಂಡವು ಈಗಾಗಲೇ ಶವಗಳನ್ನು ಹೂತು ಹಾಕಿರುವ ಎನ್ನಲಾದ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದೆ. ಈ ತನಿಖೆಯ ಭಾಗವಾಗಿ, ಮಂಗಳೂರಿನ ಕದ್ರಿ ಮಲ್ಲಿಕಟ್ಟೆಯ ನಿರೀಕ್ಷಣಾ ಮಂದಿರದಲ್ಲಿ ಎಸ್‌ಐಟಿ ಕಚೇರಿಯನ್ನು ಸ್ಥಾಪಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳಲು ಅಥವಾ ಎಸ್‌ಐಟಿಯನ್ನು ಸಂಪರ್ಕಿಸಲು ಸಾರ್ವಜನಿಕರು ಕೆಳಗಿನ ವಿವರಗಳನ್ನು ಬಳಸಬಹುದು:
ಕಚೇರಿ ವಿಳಾಸ:
ನಿರೀಕ್ಷಣಾ ಮಂದಿರ, ಮಲ್ಲಿಕಟ್ಟೆ, ಕದ್ರಿ, ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆ
(ಕಾರ್ಯಾಚರಣೆಯ ಸಮಯ: ಬೆಳಿಗ್ಗೆ 10:00 ರಿಂದ ಸಂಜೆ 5:00 ರವರೆಗೆ)
ಸಂಪರ್ಕ ಸಂಖ್ಯೆ:
ದೂರವಾಣಿ: 0824-2005301
ವಾಟ್ಸ್‌ಆಪ್: 8277986369
ಇ-ಮೇಲ್: sitdps@ksp.gov.in
ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಎಸ್‌ಐಟಿ ತಂಡವು, ದೂರುದಾರನ ಹೇಳಿಕೆಯ ಆಧಾರದ ಮೇಲೆ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸುತ್ತಮುತ್ತಲಿನ 13 ಸ್ಥಳಗಳನ್ನು ಗುರುತಿಸಿದ್ದು, ಈ ಸ್ಥಳಗಳಲ್ಲಿ ಉತ್ಖನನ ಕಾರ್ಯವನ್ನು ಆರಂಭಿಸಿದೆ. ಸಾರ್ವಜನಿಕರಿಂದ ಯಾವುದೇ ಮಾಹಿತಿಯನ್ನು ಒದಗಿಸುವಂತೆ ಎಸ್‌ಐಟಿ ಮನವಿ ಮಾಡಿದೆ.