ಒಂದೊಂದೇ ಸತ್ಯಗಳು ಹೊರಗೆ ಬರ್ತಾ ಇದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಎಸ್ಐಟಿ ಬಂಧಿಸಿ ಎಂದು ತಿಳಿಸಿದ್ದಾರೆ.
ಧರ್ಮಸ್ಥಳ ಶವಗಳನ್ನು ಹೂತಿಟ್ಟ ಆರೋಪ ಪ್ರಕರಣದಲ್ಲಿ ಮಾಸ್ಕ್ ಮ್ಯಾನ್ ಚಿನ್ನಯ್ಯನ ಬಂಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಪ್ರತಿಕ್ರಿಯಿಸಿದ್ದಾರೆ. “ಒಂದೊಂದೇ ಸತ್ಯಗಳು ಈಗ ಹೊರಗೆ ಬರುತ್ತಿವೆ. ಸತ್ಯವನ್ನು ತೊಳೆದಿಟ್ಟಂತೆ ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ಆರೋಪಿಸಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನ ದೂರಿನ ಆಧಾರದ ಮೇಲೆ ಎಸ್‌ಐಟಿ ತನಿಖೆ ನಡೆಸಿತು. ಆದರೆ, ಚಿನ್ನಯ್ಯ ತೋರಿಸಿದ ಸ್ಥಳಗಳಲ್ಲಿ ಅಗೆತವಾಗಿದ್ದರೂ, ಯಾವುದೇ ಅಸ್ಥಿಪಂಜರಗಳು ಸಿಕ್ಕಿಲ್ಲ. ಚಿನ್ನಯ್ಯನ ದೂರು ಮತ್ತು ಹೇಳಿಕೆಗಳ ಬಗ್ಗೆ ಅನುಮಾನ ಮೂಡಿದ್ದರಿಂದ, ಎಸ್‌ಐಟಿ ಆತನನ್ನು ಪ್ರಶ್ನಿಸಿತು. ಆದರೆ, ಸಮರ್ಪಕ ಉತ್ತರ ನೀಡಲು ಆತ ವಿಫಲನಾದನು.
ಚಿನ್ನಯ್ಯ ಒಂದು ತಲೆಬುರುಡೆಯನ್ನು ಪೊಲೀಸರಿಗೆ ಮತ್ತು ಕೋರ್ಟ್‌ಗೆ ಒದಗಿಸಿ ಹೇಳಿಕೆ ನೀಡಿದ್ದ. ಆದರೆ, ಆ ಬುರುಡೆ ಎಲ್ಲಿಯದು ಎನ್ನುವ ಪ್ರಶ್ನೆಗೆ ಉತ್ತರ ನೀಡಿ ಸ್ಪಷ್ಟಪಡಿಸಲು ಆತನಿಂದ ಸಾಧ್ಯವಾಗಲಿಲ್ಲ. ಈ ಕಾರಣಕ್ಕಾಗಿ, ಎಸ್‌ಐಟಿ ಚಿನ್ನಯ್ಯನನ್ನು ಬಂಧಿಸಿತು. ಇದೇ ವೇಳೆ, ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಮಹೇಶ್ ಶೆಟ್ಟಿ ತಿಮ್ಮರೋಡಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಬೆಳವಣಿಗೆಗಳ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯಿಸಿದ್ದಾರೆ. “ಒಂದೊಂದೇ ಸತ್ಯಗಳು ಈಗ ಬಯಲಿಗೆ ಬರುತ್ತಿವೆ. ಸತ್ಯವನ್ನು ತೊಳೆದಿಟ್ಟಂತೆ ಸ್ಪಷ್ಟವಾಗಿದೆ. ಎಸ್‌ಐಟಿ ತನಿಖೆಯ ಹಂತದಲ್ಲಿ ಹೆಚ್ಚು ಮಾತನಾಡುವುದಿಲ್ಲ. ಧರ್ಮಸ್ಥಳಕ್ಕೆ ಬಂದು ಬೆಂಬಲ ಸೂಚಿಸಿದ ಎಲ್ಲರಿಗೂ ಧನ್ಯವಾದ. ಕ್ಷೇತ್ರದ ಮೇಲಿನ ಅಭಿಮಾನ ಮತ್ತು ಭಕ್ತರ ವಿಶ್ವಾಸ ಹೀಗೆಯೇ ಮುಂದುವರಿಯಲಿ,” ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.