ಹೊಸ ವರ್ಷ 2026ರ ಸಂಭ್ರಮದಲ್ಲಿ ಮುಳುಗಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಅಕ್ರಮ ಪಾರ್ಟಿಗೆ ಪೊಲೀಸರು ಶಾಕ್ ನೀಡಿದ್ದಾರೆ. ಹೆಗ್ಗಡಹಳ್ಳಿ ಗ್ರಾಮದ ಒಂದು ಫಾರ್ಮ್‌ಹೌಸ್‌ನಲ್ಲಿ ಅನುಮತಿ ಪಡೆಯದೆ ನಡೆಯುತ್ತಿದ್ದ ಹೊಸ ವರ್ಷಾಚರಣೆಯ ಪಾರ್ಟಿಯ ಮೇಲೆ ಮಧ್ಯರಾತ್ರಿ ದಾಳಿ ನಡೆಸಲಾಗಿದೆ.
ಈ ಅಕ್ರಮ ಪಾರ್ಟಿಯಲ್ಲಿ ಸುಮಾರು 40-50 ಯುವಕ-ಯುವತಿಯರು ಭಾಗವಹಿಸಿದ್ದರು. ಅನುಮತಿ ಇಲ್ಲದೇ ಜೋರಾದ ಸಂಗೀತ ಹಾಕಿ, ಮೋಜು-ಮಸ್ತಿ ಮಾಡುತ್ತಿದ್ದರು. ಇದರಿಂದ ಉಂಟಾದ ಅತಿಯಾದ ಶಬ್ದ ಮಾಲಿನ್ಯದ ಬಗ್ಗೆ ಸ್ಥಳೀಯರು ದೂರು ನೀಡಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದ ತಂಡ ತಕ್ಷಣ ಕ್ರಮ ಕೈಗೊಂಡಿದೆ.
ಪೊಲೀಸರು ಸ್ಥಳಕ್ಕೆ ತಲುಪಿ ಪಾರ್ಟಿಗೆ ಬ್ರೇಕ್ ಹಾಕಿದ್ದಾರೆ. ಸ್ಥಳದಲ್ಲಿ ಇದ್ದ ಮದ್ಯದ ಬಾಟಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಫಾರ್ಮ್‌ಹೌಸ್ ಮಾಲೀಕ ಮತ್ತು ಪಾರ್ಟಿ ಆಯೋಜಕರ ವಿರುದ್ಧ ಶಬ್ದ ಮಾಲಿನ್ಯ ಮತ್ತು ಅಕ್ರಮ ಆಚರಣೆ ಸಂಬಂಧ ಪ್ರಕರಣ ದಾಖಲಿಸಲಾಗಿದೆ.
ಹೊಸ ವರ್ಷದ ಸಂಭ್ರಮವನ್ನು ಸುರಕ್ಷಿತವಾಗಿ ಆಚರಿಸುವಂತೆ ಪೊಲೀಸರು ಎಚ್ಚರಿಕೆ ನೀಡಿದ್ದು, ಅನುಮnತಿ ಇಲ್ಲದೇ ಇಂತಹ ಕಾರ್ಯಕ್ರಮಗಳು ನಡೆಸದಂತೆ ತಾಕೀತು ಮಾಡಿದ್ದಾರೆ. ಈ ಘಟನೆಯಿಂದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.
ಹೊಸ ವರ್ಷದಲ್ಲಿ ಎಲ್ಲರೂ ಸುರಕ್ಷಿತವಾಗಿ ಸಂಭ್ರಮಿಸಿ, ಶುಭಾಶಯಗಳು!





