ದಾಂಡೇಲಿಯಲ್ಲಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾ*ವು

11 (91)

ದಾಂಡೇಲಿ : ದಾಂಡೇಲಿ ನಗರದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ದಾಂಡೇಲಿ ನಗರದ ಹಳಿಯಾಳ ರಸ್ತೆಯ ಅಲೈಡ್ ಪ್ರದೇಶದಲ್ಲಿ ಭಾನುವಾರ ಮುಂಜಾನೆ ನಡೆದಿದೆ. ನಿರ್ಮಾಣ ಹಂತದಲ್ಲಿದ್ದ ಮನೆಯೊಂದಕ್ಕೆ ಕ್ಯೂರಿಂಗ್ (curing) ಮಾಡುವ ಉದ್ದೇಶದಿಂದ ನೀರು ಹಾಯಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಶಾಕ್ ತಗುಲಿ, ಜಾರ್ಖಂಡ್ ಮೂಲದ ಅಲಿ ಅನ್ಸಾರಿ (40) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಲಿ ಅನ್ಸಾರಿ ಕಳೆದ ಹತ್ತು ವರ್ಷಗಳಿಂದ ದಾಂಡೇಲಿ ನಗರದಲ್ಲಿ ನೆಲೆಸಿದ್ದರು. ವೃತ್ತಿಯಲ್ಲಿ ಟೈಲ್ಸ್ ಫಿಟ್ಟಿಂಗ್ ಗುತ್ತಿಗೆದಾರರಾಗಿದ್ದ ಅವರು, ಇತ್ತೀಚೆಗೆ ಅಲೈಡ್ ಪ್ರದೇಶದಲ್ಲಿ ಹೊಸ ಮನೆ ಕಟ್ಟಿಸುತ್ತಿದ್ದರು. ಮನೆಯೊಂದಕ್ಕೆ ಕ್ಯೂರಿಂಗ್ (curing) ಮಾಡುವ ಉದ್ದೇಶದಿಂದ ನೀರು ಹಾಯಿಸುತ್ತಿದ್ದ ವೇಳೆ ವಿದ್ಯುತ್ ಹರಿದು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

 ಘಟನಾ ಸ್ಥಳದಲ್ಲಿ ಜನರ ಆಘಾತ

ಘಟನೆಯು ಭಾನುವಾರ ಮುಂಜಾನೆ ಜರುಗಿದ್ದು, ಸುತ್ತಮುತ್ತಲಿನವರು ಅಚಾನಕ್ ಈ ದೃಶ್ಯವನ್ನು ನೋಡಿ ಬೆಚ್ಚಿಬಿದ್ದಿದ್ದಾರೆ. ಅಲಿ ಅನ್ಸಾರಿಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಆಗಲೇ ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದರು.

ಪೊಲೀಸರ ಭೇಟಿ, ತನಿಖೆ ಮುಂದುವರಿಕೆ

ಘಟನೆಯ ಮಾಹಿತಿ ಪಡೆದ ತಕ್ಷಣ ದಾಂಡೇಲಿ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ವಿದ್ಯುತ್ ತಂತುಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಯಿತು. ಮರಣೋತ್ತರ ಪರೀಕ್ಷೆಗಾಗಿ ಮೃತರ ದೇಹವನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯಕೀಯ ವರದಿಯ ನಂತರ, ಶವವನ್ನು ಸಂಬಂಧಿಕರೊಂದಿಗೆ ಹಸ್ತಾಂತರಿಸಲಾಗುವುದು ಎಂದು ಹೇಳಾಗಿದೆ

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
Exit mobile version