ಬೆಳಗಾವಿ: ಗೋಕಾಕ್‌ನ ಲಕ್ಷ್ಮಿದೇವಿ ಜಾತ್ರೆಯ ಸಂದರ್ಭದಲ್ಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರ ಪುತ್ರ ಸಂತೋಷ್ ಜಾರಕಿಹೊಳಿ ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆಗೆ ಸಂಬಂಧಿಸಿದಂತೆ, ಗೋಕಾಕ್ ಶಹರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಶನಿವಾರ ನಡೆದ ಮಹಾಲಕ್ಷ್ಮಿ ಜಾತ್ರೆಯ ಆರನೇ ದಿನದಂದು, ಸಾವಿರಾರು ಜನರ ಸಮ್ಮುಖದಲ್ಲಿ ಸಂತೋಷ್ ಜಾರಕಿಹೊಳಿ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ವಿಡಿಯೋ ವೈರಲ್ ಆಗುತ್ತಿದ್ದಂತೆ, ಗೋಕಾಕ್ ಶಹರ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಸ್ತ್ರಾಸ್ತ್ರ ಕಾಯ್ದೆಯ ಉಲ್ಲಂಘನೆಗೆ ಸಂಬಂಧಿಸಿದಂತೆ ಕಾನೂನು ಕ್ರಮಕ್ಕೆ ಒಳಪಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು,” ಎಂದು ಬೆಳಗಾವಿ ಜಿಲ್ಲಾ ಎಸ್‌ಪಿ ಭೀಮಾಶಂಕರ್ ಗುಳೇದ್ ತಿಳಿಸಿದ್ದಾರೆ.