ಬೆಳಗಾವಿಯಲ್ಲಿ ಪೊಲೀಸರ ಎದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ

Web 2025 07 05t153026.868

ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ನಡೆದ ಮಹಾಲಕ್ಷ್ಮೀ ದೇವಿ ಜಾತ್ರೆಯ ಸಂದರ್ಭದಲ್ಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರ ಪುತ್ರ ಸಂತೋಷ್ ಜಾರಕಿಹೊಳಿ ಪೊಲೀಸರ ಸಮ್ಮುಖದಲ್ಲಿ ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಗೋಕಾಕ್ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸಾರ್ವಜನಿಕ ಸ್ಥಳದಲ್ಲಿ ಶಸ್ತ್ರಾಸ್ತ್ರ ಬಳಕೆಯ ಬಗ್ಗೆ ತೀವ್ರ ಚರ್ಚೆಗೆ ಕಾರಣವಾಗಿದೆ.

ADVERTISEMENT
ADVERTISEMENT

ಗೋಕಾಕ್‌ನ ಲಕ್ಷ್ಮೀದೇವಿ ಜಾತ್ರೆಯಲ್ಲಿ ಸಂತೋಷ್ ಜಾರಕಿಹೊಳಿ ತಮ್ಮ ಬೆಂಬಲಿಗರೊಂದಿಗೆ ಭಾಗವಹಿಸಿದ್ದರು. ಈ ವೇಳೆ ಅವರು ಬಂದೂಕಿನಿಂದ ಗಾಳಿಯಲ್ಲಿ ಒಂದು ಸುತ್ತಿನ ಗುಂಡು ಹಾರಿಸಿದ್ದಾರೆ. ನೂರಾರು ಜನರ ಸಮ್ಮುಖದಲ್ಲಿ ಮತ್ತು ಪೊಲೀಸರ ಉಪಸ್ಥಿತಿಯಲ್ಲೇ ಈ ಘಟನೆ ನಡೆದಿದೆ. ಗುಂಡು ಹಾರಾಟದ ಸಂದರ್ಭದಲ್ಲಿ ಸಂತೋಷ್ ಜಾರಕಿಹೊಳಿಯ ಬೆಂಬಲಿಗರು ಘೋಷಣೆ ಕೂಗಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರವಾಗಿ ಹರಿದಾಡುತ್ತಿದ್ದು, ಸಾರ್ವಜನಿಕರಲ್ಲಿ ಆಕ್ರೋಶ ಮತ್ತು ಆತಂಕವನ್ನು ಉಂಟುಮಾಡಿದೆ.

Exit mobile version