ಮಳೆಯ ಅವಾಂತರ: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿ

Untitled design 2025 04 09t185532.246

ಚಿಕ್ಕಮಗಳೂರು: ಬಸ್ ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್‌ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಲದುರ್ಗ ಗ್ರಾಮದ ಬಳಿ ನಡೆದಿದೆ.

ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ಈ ಬಸ್, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮನೆ ಮೇಲೆ ಉರುಳಿಬಿದ್ದಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 50 ಜನರಲ್ಲಿ 20 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಜಯಪುರ ಮತ್ತು ಕೊಪ್ಪ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭೀಕರ ರಸ್ತೆ ಅಪಘಾತ: ಓರ್ವ ಸಾ*ವು, ಹತ್ತಕ್ಕೂ ಹೆಚ್ಚು ಜನರಿಗೆ ಗಾಯ

ಮಂಗಳೂರು, ಏಪ್ರಿಲ್ 4 : ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತ ಸಂಭವಿಸಿದೆ.  ಬೆಂಗಳೂರಿನಿಂದ ಮಂಗಳೂರು ಮಾರ್ಗವಾಗಿ ಉಡುಪಿಗೆ ತೆರಳುತ್ತಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ,  ಅಪಘಾತಕ್ಕೀಡಾಗಿದೆ. ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದು, ಹತ್ತಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಈ ಘಟನೆ ನಿನ್ನೆ ರಾತ್ರಿ ಸಂಭವಿಸಿದ್ದು, ಅಪಘಾತದ ತೀವ್ರತೆಯಿಂದಾಗಿ ಸ್ಥಳೀಯರು ಸಹಾಯಕ್ಕೆ ಧಾವಿಸಿ ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತವು ಉಪ್ಪಿನಂಗಡಿಯ ನೀರಕಟ್ಟೆ ಬಳಿಯ ತಿರುವಿನಲ್ಲಿ ಸಂಭವಿಸಿದೆ.

ಬಸ್‌ವು ರಾತ್ರಿ ವೇಳೆಗೆ ಬೆಂಗಳೂರಿನಿಂದ ಹೊರಟಿದ್ದು, ಮಂಗಳೂರು ಮಾರ್ಗವಾಗಿ ಉಡುಪಿಗೆ ಹೋಗುತ್ತಿದ್ದಂತೆ, ನೀರಕಟ್ಟೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ. ತೀವ್ರ ವೇಗದಲ್ಲಿ ಇಳಿಜಾರಿನಲ್ಲಿ ಬರುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ, ಪ್ರಯಾಣಿಸುತ್ತಿದ್ದ ಒಬ್ಬ ಪ್ರಯಾಣಿಕನು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರಿಗೆ ತೀವ್ರ ಗಾಯಗಳಾಗಿವೆ.

ಘಟನೆಯ ನಂತರ ಸ್ಥಳೀಯ ನಿವಾಸಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ಬಸ್‌ನಿಂದ ಹೊರತೆಗೆದು ಪುತ್ತೂರು ಹಾಗೂ ಮಂಗಳೂರಿನ ವಿವಿಧ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಗಾಯಾಳುಗಳಲ್ಲಿ ಕೆಲವು ಮಂದಿ ತೀವ್ರ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಆಸ್ಪತ್ರೆಯ ವೈದ್ಯರು ಗಾಯಾಳುಗಳಿಗೆ ತಕ್ಷಣವೇ ಚಿಕಿತ್ಸೆ ನೀಡಿದ್ದು, ಕೆಲವರನ್ನು ಐಸಿಯುವಿಗೂ ಸ್ಥಳಾಂತರಿಸಲಾಗಿದೆ.

ಘಟನೆಯ ತಕ್ಷಣದ ನಂತರ ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಪೊಲೀಸರು ಈ ಸಂಬಂಧ ತನಿಖೆಯನ್ನು ಪ್ರಾರಂಭಿಸಿದ್ದು, ಚಾಲಕನ ವಿರುದ್ಧ ನಿರ್ಲಕ್ಷ್ಯದಿಂದ ಚಾಲನೆ ಮಾಡಿದ ಪ್ರಕರಣ ದಾಖಲಿಸಲಾಗಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
Exit mobile version