ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನ ಗಡಿ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹಾರಂಗಿ ಜಲಾಶಯಕ್ಕೆ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಈ ಸಂದರ್ಭದಲ್ಲಿ, ನೀರಾವರಿ ಇಲಾಖೆಯು ಜಲಾಶಯಕ್ಕೆ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಆದೇಶ ಹೊರಡಿಸಿದೆ.
ಹಾರಂಗಿ ಜಲಾಶಯದ ಸುತ್ತಮುತ್ತ ಕಟ್ಟುನಿಟ್ಟಿನ ಕಾವಲು ಇಡಲಾಗಿದ್ದು, ಹೆಚ್ಚಿನ ಸಂಖ್ಯೆಯ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈ ಕ್ರಮವು ಸಾರ್ವಜನಿಕ ಸುರಕ್ಷತೆಯನ್ನು ಖಾತ್ರಿಪಡಿಸುವ ಉದ್ದೇಶದಿಂದ ಕೈಗೊಳ್ಳಲಾಗಿದ್ದು, ಯಾವುದೇ ಅನಾಹುತ ತಡೆಗಟ್ಟಲು ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿದೆ.