ಹೆಬ್ಬಾಳ ಫ್ಲೈಓವರ್‌ನಲ್ಲಿ ಭೀಕರ ಅಪಘಾತ: ಕಲ್ಲು ತುಂಬಿದ ಟ್ರಕ್ ಪಲ್ಟಿ, ಒಬ್ಬ ಸಾವು

Befunky collage 2025 05 24t080854.425

ಬೆಂಗಳೂರು: ಹೆಬ್ಬಾಳ ಫ್ಲೈಓವರ್‌ನಲ್ಲಿ ನಿನ್ನೆ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಬರುವ ಮಾರ್ಗದಲ್ಲಿ ಈ ದುರ್ಘಟನೆ ನಡೆದಿದೆ. ಹೆಬ್ಬಾಳ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ಈ ಘಟನೆಯಲ್ಲಿ ಮೂರು ವಾಹನಗಳು ಧ್ವಂಸಗೊಂಡಿವೆ.

ಅಪಘಾತದಲ್ಲಿ ಕಲ್ಲು ತುಂಬಿದ 10 ವ್ಹೀಲರ್ ಓಪನ್ ಬಾಡಿ ಟ್ರಕ್, ಕಸದ ಲಾರಿ ಮತ್ತು ಎರ್ಟಿಗಾ ಕಾರು ಸಿಲುಕಿವೆ. 10 ವ್ಹೀಲರ್ ಟ್ರಕ್ ಕಸದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಸದ ಲಾರಿಯ ಚಾಲಕ ಫಯಾಜ್ ಅಹಮ್ಮದ್ (Fayaz Ahmad) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲ್ಲು ತುಂಬಿದ 10 ವ್ಹೀಲರ್ ಟ್ರಕ್ ರಸ್ತೆಯ ಮೇಲೆ ಪಲ್ಟಿಯಾಗಿದ್ದು, ಇದರಿಂದ ಸಂಚಾರಕ್ಕೆ ತೀವ್ರ ಅಡಚಣೆಯಾಯಿತು. ಹೆಬ್ಬಾಳ ಸಂಚಾರ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ವಾಹನಗಳನ್ನು ತೆರವುಗೊಳಿಸಿದ್ದಾರೆ. ಈ ಘಟನೆಯಿಂದಾಗಿ ವಿಮಾನ ನಿಲ್ದಾಣದ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

 

Exit mobile version