ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಇಡಿ ಕಸ್ಟಡಿಗೆ: ಕೋಟಿಗಟ್ಟಲೆ ಹಣ, ಚಿನ್ನ ಜಪ್ತಿ!

Chitradurga mla k.c. veerendra puppy arrested in illegal betting case

ಅಕ್ರಮ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿ, ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಸಿಕ್ಕಿಂನಲ್ಲಿ ಶುಕ್ರವಾರ ಬಂಧಿಸಿದ್ದರು. ಬೆಂಗಳೂರಿನ 35ನೇ ಸಿಸಿಹೆಚ್ ಕೋರ್ಟ್, ಶಾಸಕರನ್ನು ಆಗಸ್ಟ್ 28 ರವರೆಗೆ ಇಡಿ ಕಸ್ಟಡಿಗೆ ನೀಡಿ ಆದೇಶಿಸಿದೆ.

ಇಡಿ ಅಧಿಕಾರಿಗಳು ಶಾಸಕರನ್ನು 14 ದಿನಗಳ ಕಾಲ ವಶಕ್ಕೆ ನೀಡುವಂತೆ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಆದರೆ, ವೀರೇಂದ್ರ ಪಪ್ಪಿ ಅವರ ಪರ ವಕೀಲರು, ಇಡಿ ಕಸ್ಟಡಿಗೆ ಅವಶ್ಯಕತೆ ಇಲ್ಲ ಎಂದು ವಾದಿಸಿದರು. ಎರಡೂ ಕಡೆಯ ವಾದಗಳನ್ನು ಆಲಿಸಿದ ನ್ಯಾಯಾಧೀಶ ಸೈಯದ್ ಬಿ ರೆಹಮಾನ್, ಶಾಸಕರನ್ನು ಆಗಸ್ಟ್ 28 ರವರೆಗೆ ಇಡಿ ವಶಕ್ಕೆ ನೀಡಿ ಆದೇಶ ನೀಡಿದ್ದಾರೆ.

ಇಡಿ ಪರ ವಕೀಲರು, “ತನಿಖೆಗೆ ಶಾಸಕರ ಕಸ್ಟಡಿ ಅಗತ್ಯವಿದೆ. ಕೋಟ್ಯಂತರ ರೂಪಾಯಿ ನಗದು, ಕೆಜಿ ಗಟ್ಟಲೇ ಚಿನ್ನ, ವಿದೇಶಿ ವ್ಯವಹಾರಗಳು, ಕ್ಯಾಸಿನೋಗಳು ಮತ್ತು ಆನ್‌ಲೈನ್ ಬೆಟ್ಟಿಂಗ್ ಸೈಟ್‌ಗಳಲ್ಲಿ ವ್ಯವಹಾರ ನಡೆದಿದೆ. ಈ ಬಗ್ಗೆ ವಿಚಾರಣೆ ಅಗತ್ಯ” ಎಂದು ವಾದಿಸಿದರು.

ಅಕ್ರಮ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿ, ಇಡಿ ಅಧಿಕಾರಿಗಳು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ ಸಂಬಂಧಿಸಿದ 31 ಸ್ಥಳಗಳಲ್ಲಿ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 12 ಕೋಟಿ ರೂ. ನಗದು (ಒಂದು ಕೋಟಿ ವಿದೇಶಿ ಕರೆನ್ಸಿ ಸೇರಿ), 6 ಕೋಟಿ ರೂ. ಮೌಲ್ಯದ ಚಿನ್ನಾಭರಣ, 10 ಕೆಜಿ ಬೆಳ್ಳಿ ಮತ್ತು ನಾಲ್ಕು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ವೀರೇಂದ್ರ ಪಪ್ಪಿ ತಮ್ಮ ಸಹಚರರೊಂದಿಗೆ ಸಿಕ್ಕಿಂನ ಗ್ಯಾಂಗ್ಟಕ್‌ಗೆ ಪ್ರಯಾಣಿಸಿದ್ದರು. ಅಲ್ಲಿ ಕ್ಯಾಸಿನೊಗಾಗಿ ಭೂಮಿಯನ್ನು ಗುತ್ತಿಗೆಗೆ ಪಡೆಯುತ್ತಿದ್ದರು ಎಂದು ಆರೋಪಿಸಲಾಗಿದೆ. ಇಡಿ ದಾಳಿಯಲ್ಲಿ ವಶಪಡಿಸಿಕೊಂಡ ಒಟ್ಟು ಆಸ್ತಿಯಲ್ಲಿ 12 ಕೋಟಿ ರೂ. ನಗದು, 6 ಕೋಟಿ ರೂ. ಮೌಲ್ಯದ ಚಿನ್ನಾಭರಣ, 10 ಕೆಜಿ ಬೆಳ್ಳಿ ಮತ್ತು ನಾಲ್ಕು ವಾಹನಗಳು ಸೇರಿವೆ.

 

Exit mobile version