ಇಂದು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ವಾಹನ ಸವಾರರೆ ಎಚ್ಚರ, ಪಾರ್ಕಿಂಗ್‌ಗೆ ನೋ ಎಂಟ್ರಿ!

Film 2025 04 10t121353.501

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಟಾ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಹಿನ್ನೆಲೆಯಲ್ಲಿ ಸುಗಮ ಸಂಚಾರ ಮತ್ತು ದಟ್ಟಣೆ ತಪ್ಪಿಸಲು ಕೆಲವು ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ. ಗುರುವಾರ ನಡೆಯಲಿರುವ ಐಪಿಎಲ್ ಪಂದ್ಯದ ಸಂದರ್ಭದಲ್ಲಿ ಟ್ರಾಫಿಕ್ ಜಾಮ್ ತಡೆಯಲು ಸಂಚಾರ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಪ್ರೇಕ್ಷಕರಿಗೆ ಸಾರ್ವಜನಿಕ ಸಾರಿಗೆ ಬಳಸುವಂತೆ ಸೂಚಿಸಲಾಗಿದೆ.

ಸಂಚಾರ ನಿಷೇಧದ ವಿವರ

ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳಲ್ಲಿ ಗುರುವಾರ ಸಂಜೆ 3 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ವಾಹನ ನಿಲುಗಡೆಗೆ ಅವಕಾಶವಿರುವುದಿಲ್ಲ. ಈ ರಸ್ತೆಗಳಲ್ಲಿ ಸಂಚಾರ ದಟ್ಟಣೆ ತಪ್ಪಿಸಲು ಮತ್ತು ಪಾರ್ಕಿಂಗ್ ಸಮಸ್ಯೆ ತಡೆಯಲು ಈ ನಿರ್ಬಂಧ ಹೇರಲಾಗಿದೆ. ನಿಷೇಧಿಸಲಾದ ರಸ್ತೆಗಳು ಇಂತಿವೆ:

ಕ್ವಿನ್ಸ್‌ ರಸ್ತೆ-ಬಾಳೇಕುಂದ್ರಿ ವೃತ್ತದಿಂದ ಸ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ.
ಎಂ.ಜಿ ರಸ್ತೆ ಅನಿಲ್ ಕುಂಬ್ಳೆ ವೃತ್ತದಿಂದ ಸ್ಟೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ.
ಲಿಂಕ್ ರಸ್ತೆ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ ವರೆಗೆ.
ರಾಜಭವನ ರಸ್ತೆ-ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆಗಳಲ್ಲಿ
ಸೆಂಟ್ರಲ್ ಸ್ಟ್ರೀಟ್ ರಸ್ತೆಯ ಎರಡೂ ಕಡೆ.
ಕಬ್ಬನ್ ರಸ್ತೆ ಸಿ.ಟಿ.ಓ. ವೃತ್ತದಿಂದ ಡಿಕೆನ್ಸನ್ ರಸ್ತೆ ಜಂಕ್ಷನ್ ವರೆಗೆ ರಸ್ತೆಯ ಎರಡೂ ಕಡೆ. ಕಬ್ಬನ್ ರಸ್ತೆಯಲ್ಲಿ ಕಾಮರಾಜ ರಸ್ತೆ ಜಂಕ್ಷನ್‌ನಿಂದ ಡಿಕೆನ್ಸನ್ ರಸ್ತೆ ಜಂಕ್ಷನ್ ವರೆಗೆ ಬಿಎಂಟಿಸಿ ಬಸ್‌ ಗಳನ್ನು ಹೊರತುಪಡಿಸಿ ಇತರೆ ಎಲ್ಲಾ ತರಹದ ವಾಹನಗಳ ನಿಲುಗಡೆಯನ್ನು ನಿಷೇಧಿಸಿದೆ.
ಸೆಂಟ್ ಮಾರ್ಕ್ಸ್ ರಸ್ತೆ-ಕ್ಯಾಶ್ ಫಾರ್ಮಸಿ ಜಂಕ್ಷನ್‌ನಿಂದ ಅನಿಲ್ ಕುಂಬ್ಳೆ ವೃತ್ತದ ವರೆಗೆ.
ಮ್ಯೂಸಿಯಂ ರಸ್ತೆ ಎಂಜಿ ರಸ್ತೆಯಿಂದ ಸೆಂಟ್
ಮಾರ್ಕ್ಸ್ ರಸ್ತೆ ವರೆಗೆ ಹಾಗೂ ಆಶಿರ್ವಾದಂ ವೃತ್ತದವರೆಗೆ
ಕಸ್ತೂರ ಬಾ ರಸ್ತೆ ಕ್ಲೀನ್ಸ್ ವೃತ್ತದಿಂದ ಹಡ್ನನ್ ವೃತ್ತದ ವರೆಗೆ ಹಾಗೂ ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ಆ‌ರ್.ಆ‌ರ್.ಎಂ.ಆರ್ ವೃತ್ತದವರೆಗೆ
ಕಬ್ಬನ್‌ಪಾರ್ಕ್ ಒಳಭಾಗ ಕಿಂಗ್ ರಸ್ತೆ, ಪ್ರಸ್ ಕ್ಲಬ್ ಮುಂಭಾಗ, ಬಾಲಭವನ ಮುಂಭಾಗ, ಪೌಂಟೇನ್ ರಸ್ತೆಗಳಲ್ಲಿ ವಾಹನಗಳ ಪಾರ್ಕಿಂಗ್ ಕಡ್ಡಾಯವಾಗಿ ನಿಷೇಧಿಸಲಾಗಿದೆ.
ಲ್ಯಾವೆಲ್ಲಿ ರಸ್ತೆ ನಿಷೇಧಿಸಲಾಗಿದೆ. ಕ್ಲೀನ್ಸ್ ವೃತ್ತದಿಂದ ವಿಠಲ್ ಮಲ್ಯ ರಸ್ತೆ ಜಂಕ್ಷನ್ವರೆಗೆ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.
ವಿಠಲ್ ಮಲ್ಯ ರಸ್ತೆ-ಸಿದ್ದಲಿಂಗಯ್ಯ ವೃತ್ತದಿಂದ ಸೆಂಟ್ ಮಾರ್ಕ್ಸ್ ರಸ್ತೆಯ ಬಿಷಪ್ ಕಾಟನ್ ಬಾಲಕಿಯರ ಶಾಲೆಯವರೆಗೆ ವಾಹನಗಳ ನಿಲುಗಡೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ವಾಹನಗಳ ನಿಲುಗಡೆಗೆ ವ್ಯವಸ್ಥೆ :
ಪಂದ್ಯ ವೀಕ್ಷಣೆ ಮಾಡಲು ಬರುವ ಸಾರ್ವಜನಿಕರ ವಾಹನಗಳನ್ನು ಸೆಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನ ಮತ್ತು ಯು.ಬಿ. ಸಿಟಿ ನಿಲುಗಡೆ ಸ್ಥಳದಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿಯಲ್ಲಿ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
3 ಕೆಎಸ್‌ಸಿಎ ಸದಸ್ಯರ ವಾಹನಗಳನ್ನು ಸೆಂಟ್ ಜೋಸೆಫ್ (ಯೂರೋಪಿಯನ್) ಬಾಲಕರ ಶಾಲೆ ಮೈದಾನ (ಮ್ಯೂಸಿಯಂ ರಸ್ತೆ) ಇಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
ಸ್ಟೇಡಿಯಂನ ಪ್ರವೇಶ, ನಿರ್ಗಮನ ಮಾರ್ಗ :
ಗೇಟ್ ನಂ.1 ರಿಂದ ಗೇಟ್ ನಂ.6 ಕಬ್ಬನ್ ರಸ್ತೆಯಲ್ಲಿದ್ದು, ಪ್ರವೇಶ ಮತ್ತು ನಿರ್ಗಮನ ಅವಕಾಶ ಕಲ್ಪಿಸಿದೆ.
ಗೇಟ್ ನಂ.7 ರಿಂದ ಗೇಟ್ ನಂ.11 ರವರೆಗೆ ಲಿಂಕ್ ರಸ್ತೆಯಲ್ಲಿದ್ದು, ಅನಿಲ್ ಕುಂಬ್ಳೆ ವೃತ್ತ ಮತ್ತು ಬಿ.ಆರ್.ವಿ. ವೃತ್ತದ ಕಡೆಯಿಂದ ಪ್ರವೇಶ ಮತ್ತು ನಿರ್ಗಮನ ಅವಕಾಶ ಕಲ್ಪಿಸಿದೆ.
ಗೇಟ್ ನಂ.12 ರಿಂದ 21 ವರೆಗೆ ಕ್ರೀನ್ಸ್ ರಸ್ತೆಯಲ್ಲಿದ್ದು, ಇಲ್ಲಿ ಪ್ರವೇಶ ಮತ್ತು ನಿರ್ಗಮನ ಅವಕಾಶ ಕಲ್ಪಿಸಿದೆ.

ಕ್ರೀಡಾಂಗಣದ ಸುತ್ತಮುತ್ತ ಪಾರ್ಕಿಂಗ್ ಸ್ಥಳಗಳ ಕೊರತೆ ಮತ್ತು ಸಂಚಾರ ದಟ್ಟಣೆ ತಪ್ಪಿಸಲು, ಪ್ರೇಕ್ಷಕರು ಸಾಧ್ಯವಾದಷ್ಟು ಬಿಎಂಟಿಸಿ ಬಸ್‌ಗಳು ಮತ್ತು ಮೆಟ್ರೋ ಸೇವೆಯನ್ನು ಬಳಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ. ಈ ವ್ಯವಸ್ಥೆಯಿಂದ ಪಂದ್ಯ ದಿನದಂದು ಸಂಚಾರ ಸುಗಮವಾಗಿ ಸಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಪಂದ್ಯ ವೀಕ್ಷಣೆಗೆ ತೆರಳುವವರು ಈ ಸಂಚಾರ ನಿರ್ಬಂಧಗಳನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣ ಯೋಜನೆ ರೂಪಿಸುವಂತೆ ಸೂಚಿಸಲಾಗಿದೆ. ಸಾರ್ವಜನಿಕ ಸಾರಿಗೆ ಬಳಕೆಯಿಂದ ಟ್ರಾಫಿಕ್ ಜಾಮ್ ತಪ್ಪಿಸುವ ಜೊತೆಗೆ ಪಾರ್ಕಿಂಗ್ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

Exit mobile version