ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಸಾಕು , ಇದು ಜೆಡಿಎಸ್ ಪಕ್ಷದ ಧ್ವನಿಯಲ್ಲ, ಇದು ಜನಸಾಮಾನ್ಯನ ದನಿ

Police (10)

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ದುರಾಡಳಿತ ವಿರೋಧಿಸಿ ಬಿಜೆಪಿ ಜನಾಕ್ರೋಶ ಅಭಿಯಾನ ನಡೆಸುತ್ತಿರುವ ಬೆನ್ನಲ್ಲೇ, ಅದರ ಮಿತ್ರ ಪಕ್ಷ ಜೆಡಿಎಸ್ ಇಂದು ಪ್ರತಿಭಟನೆ ನಡೆಸುತ್ತಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಮತ್ತು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತ, ಅದಕ್ಷತೆ, ಅಪ್ರಮಾಣಿಕತೆ, ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಗುತ್ತಿಗೆಯಲ್ಲಿನ ಪರ್ಸೆಂಟೇಜ್ ಮತ್ತು ಜನರ ದಿನಬಳಕೆ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಜೆಡಿಎಸ್ ಪ್ರತಿಭಟನೆ ನಡೆಸುತ್ತಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದಲೂ ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಪರದಾಡುತ್ತಿದೆ. ರಾಜ್ಯದ ಜನರನ್ನು ಸುಲಿದು ಶೋಷಣೆ ಮಾಡಿತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಜೆಡಿಎಸ್ ಪಕ್ಷ, ‘ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಸಾಕು’ ಇದು ಪಕ್ಷದ ದನಿಯಲ್ಲ, ಇದು ಸಮಸ್ತ ಕನ್ನಡಿಗರ ದನಿಯಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕುಮಾರಸ್ವಾಮಿ ತಮ್ಮ ಎಕ್ಸ್ ಪೇಜ್ ನಲ್ಲಿ ಟ್ವೀಟ್ ಮಾಡಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

Exit mobile version