ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ಸಾವು

123 2025 04 24t100607.986

ಕಲಬುರಗಿ: ಅಫಜಲಪುರ ಮುಖ್ಯ ರಸ್ತೆಯ ಗೊಬ್ಬೂರ ಬಳಿ ಇಂದು ಬೆಳಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಸಂಭವಿಸಿದೆ. ಮೃತರು ಆಯೇಷಾ (70), ಅಜ್ಮೆರಾ (30) ಮತ್ತು ಅವರ ಎರಡು ವರ್ಷದ ಮಗಳು ಜೈನಬ್.

ಮೃತರು ಕಲಬುರಗಿ ನಗರದ ಮಿಲ್ಲತ್ ನಗರ ಬಡಾವಣೆಯ ನಿವಾಸಿಗಳು. ಇಂದು ಬೆಳಿಗ್ಗೆ ಕಾರಿನಲ್ಲಿ ಒಂದೇ ಕುಟುಂಬದ ಒಟ್ಟು ಎಂಟು ಜನರು, ಅದರಲ್ಲಿ ಐವರು ಮಕ್ಕಳು ಸೇರಿದಂತೆ, ಸಂಬಂಧಿಕರ ಮಗುವಿನ ಜವಳ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಈ ವೇಳೆ ಗೊಬ್ಬೂರ ಗ್ರಾಮದ ಬಳಿ ರಸ್ತೆಗೆ ಅಡ್ಡ ಬಂದ ಶ್ವಾನವನ್ನು ಉಳಿಸಲು ಯತ್ನಿಸಿದ ಕಾರು ಚಾಲಕ, ರಸ್ತೆ ಬದಿಯ ತಡೆ ಕಂಬಗಳಿಗೆ ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಆರು ತಡೆ ಕಂಬಗಳು ಧ್ವಂಸವಾಗಿವೆ. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆಯ ಬಗ್ಗೆ ದೇವಲ ಗಾನಗಾಣಗಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version