ಹುಬ್ಬಳ್ಳಿ ಧಾರವಾಡದಲ್ಲಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಅವರ ನಿವಾಸ ಕಾವೇರಿಯಲ್ಲಿ ಮಹತ್ವದ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಎಲೆಕ್ಟ್ರಿಕ್ ರಾಪಿಡ್ ಟ್ರಾನ್ಸಿಟ್ (e-RT) ಆರಂಭಿಸುವ ಕುರಿತು HESS AG, HESS INDIA ಮತ್ತು SSB AG ಸಂಸ್ಥೆಗಳೊಂದಿಗೆ ಪರಸ್ಪರ ಒಡಂಬಡಿಕೆಗೆ ಸಹಿ ಹಾಕಲಾಯಿತು.
ಯೋಜನೆ ಅನುಷ್ಠಾನ ಕುರಿತು ಮೂರು ತಿಂಗಳ ಒಳಗಾಗಿ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು.
ಯೋಜನೆಯ ಮುಖ್ಯಾಂಶಗಳು:
- ಇದು ಸಂಪೂರ್ಣ ವಿದ್ಯುತ್ ಚಾಲಿತ ವ್ಯವಸ್ಥೆಯಾಗಿದ್ದು ನಗರದಲ್ಲಿ ಎತ್ತರಿಸಿದ ರಸ್ತೆ ಹಾಗೂ ಇತರೆಡೆ ನೆಲದ ಮೇಲೆ ಸಂಚರಿಸಲಿದೆ. ಇದರಲ್ಲಿ 250 ಜನರು ಒಮ್ಮೆಗೆ ಪ್ರಯಾಣಿಸಬಹುದಾಗಿದೆ. ಕಳೆದ ಒಂದು ವರ್ಷದಿಂದ ಯೋಜನೆ ಕಾರ್ಯ ಸಾಧ್ಯತೆ ಬಗ್ಗೆ ಅಧ್ಯಯನ ನಡೆಸಲಾಗಿದೆ.
- ಮೆಟ್ರೋ ಮಾದರಿಯ ಈ ಸಂಚಾರಿ ವ್ಯವಸ್ಥೆ ಯುರೋಪಿನ ಹಲವು ರಾಷ್ಟ್ರಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಸಂಸ್ಥೆಗಳ ಪ್ರತಿನಿಧಿಗಳು ಮಾಹಿತಿ ನೀಡಿದರು.
- ಹುಬ್ಬಳ್ಳಿ ಧಾರವಾಡದಲ್ಲಿ ಈ ಯೋಜನೆ ಯಶಸ್ವಿಯಾದರೆ, ರಾಜ್ಯದ ಇತರ ಎರಡನೇ ಹಂತದ ನಗರಗಳಿಗೂ ಇದನ್ನು ವಿಸ್ತರಿಸಬಹುದಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಸಮಾಜ ಕಲ್ಯಾಣ ಸಚಿವ ಮಹಾದೇವಪ್ಪ, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹೆಚ್ ಇ ಎಸ್ ಎಸ್ ಎಜಿ ಸಂಸ್ಥೆಯ ಸುಸಾನ್ ವಾನ್ ಸುರಿ, ಎಸ್ಎಸ್ ಬಿ ಸಂಸ್ಥೆಯ ನಿರ್ದೇಶಕ ಬುರಾಕ್ ಸೆನಸರ್ ಮತ್ತಿತರರು ಉಪಸ್ಥಿತರಿದ್ದರು.
ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
- Tata Play-1665
- U-Digital-ಮೈಸೂರು-160
- Metro Cast Network-ಬೆಂಗಳೂರು-ಬೆಳಗಾವಿ-30-828
- V4 digital network-623
- Abhishek network-817
- Malnad Digital network-45
- JBM network-ರಾಮದುರ್ಗ-54
- Channel net nine-ಧಾರವಾಡ-128
- Basava cable network-ಚಳ್ಳಕೆರೆ-54
- City channel network– ಚಳ್ಳಕೆರೆ-54
- RST digital-ಕಾರ್ಕಳ-101
- Vinayak cable-ಪಟ್ಟನಾಯಕನಹಳ್ಳಿ-54
- Mubarak digital-ಸಂಡೂರು-54
- SB cable-ಸವದತ್ತಿ-54
- Bhosale network-ವಿಜಯಪುರ-54
- Surya digital-ಜಗಳೂರು-54
- Gayatri network-ಸಿಂಧನೂರು-54
- Global vision-ದಾವಣಗೆರೆ-54
- Janani cable-ಮಂಡ್ಯ-54
- Hira cable-ಬೆಳಗಾವಿ-ಹುಬ್ಬಳ್ಳಿ-54
- UDC network-ಹಾರೋಗೇರಿ-54
- Moka cable-ಬಳ್ಳಾರಿ-100
- CAN network-ಚಿಕ್ಕೋಡಿ-54
- KK digital-ಗಂಗಾವತಿ-54
- Victory network-ದಾವಣಗೆರೆ-54
