ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹರಿಶ್ಚಂದ್ರ ಘಾಟ್ ಬಡಾವಣೆಯಲ್ಲಿ 11 ವರ್ಷದ ಬಾಲಕಿ ಸ್ಪಂದನ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಡೆದಿದೆ.
ಸ್ಪಂದನ ಎಂಬಳು ರುದ್ರಮ್ಮ ಮತ್ತು ಶ್ರೀನಿವಾಸ್ ಎಂಬ ದಂಪತಿಯ ಪುತ್ರಿ. ಮಧ್ಯಾಹ್ನ ಸಮಯದಲ್ಲಿ ಗೆಳತಿಯೊಂದಿಗೆ ಸೈಕಲ್ ಆಟವಾಡುತ್ತಿದ್ದ ಸಂದರ್ಭ, ಸ್ಪಂದನ “ನಾನು ಸೈಕಲ್ ಓಡಿಸುತ್ತೇನೆ, ಕೊಡು” ಎಂದು ಕೇಳಿದಾಗ ಗೆಳತಿ ನಿರಾಕರಿಸಿದ್ದಳು. ಇದರಿಂದ ಬೇಸತ್ತ ಸ್ಪಂದನ, “ಸೈಕಲ್ ಕೊಡದಿದ್ದರೆ ನೇಣು ಹಾಕಿಕೊಳ್ಳುತ್ತೇನೆ” ಎಂದು ಹೇಳಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಾಗಿಲು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಘಟನೆಯ ಸ್ಥಳಕ್ಕೆ ಡಿವೈಎಸ್ಪಿ ಶಿವಕುಮಾರ್ ಹಾಗೂ ಸಿಪಿಐ ರಾಘವೇಂದ್ರ ಕಾಂಡಿಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರಿನಲ್ಲಿ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ
ತುಮಕೂರು: ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಶಿರಾ ತಾಲೂಕಿನ ಕುಂಟೆಗೌಡನಪಾಳ್ಯ ಮೂಲದ ದೀಪಿಕಾ (19) ಆತ್ಯೆಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ತುಮಕೂರಿನ ಕುಣಿಗಲ್ ರಸ್ತೆಯಲ್ಲಿರುವ ಸಿದ್ದಾರ್ಥ ಪಿಯು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು.
ಘಟನೆ ವಿವರ
ದೀಪಿಕಾ ಎಂಬ ವಿದ್ಯಾರ್ಥಿನಿ ಸಿದ್ದಾರ್ಥ ಪಿಯುಸಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ವಸತಿ ನಿಲಯದಲ್ಲಿ ವಾಸವಾಗಿದ್ದಳು. ಹಾಸ್ಟೆಲ್‌ನ ಮಹಡಿಯಲ್ಲಿ ತನ್ನ ವೇಲಿಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ದುರ್ಘಟನೆ ತಿಳಿಯುತ್ತಿದ್ದಂತೆ ಜಯನಗರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ
ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ದೀಪಿಕಾ ಮನೆಯಲ್ಲಿ ಅಥವಾ ಕಾಲೇಜಿನಲ್ಲಿ ಯಾವುದೇ ರೀತಿಯ ಸಮಸ್ಯೆ ಎದುರಿಸುತ್ತಿದ್ದಳಾ ಎಂಬುದರ ಕುರಿತು ಮಾಹಿತಿ ಹೊರಬರಬೇಕಿದೆ.
ಪೋಲೀಸ್ ಪರಿಶೀಲನೆ
ಈ ಘಟನೆಯ ನಂತರ ದೀಪಿಕಾ ಮೃತದೇಹವನ್ನು ತುಮಕೂರು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಪೊಲೀಸರ ಪ್ರಾಥಮಿಕ ತನಿಖೆ ಮುಂದುವರಿದಿದೆ.