• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಯುದ್ಧ ಭೀತಿ ನಡುವೆ ಕರ್ನಾಟಕದಲ್ಲಿ ಬಿಗಿ ಭದ್ರತೆ: ಗೃಹ ಸಚಿವ ಜಿ.ಪರಮೇಶ್ವರ್

ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ನಿಯೋಜನೆ: ಫೇಕ್ ನ್ಯೂಸ್‌ಗೆ ಕಡಿವಾಣ

admin by admin
May 10, 2025 - 1:05 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Befunky collage 2025 05 10t130457.333

ಬೆಂಗಳೂರು: ರಾಜ್ಯದ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿರುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನತೆ ಮತ್ತು ಯುದ್ಧ ಭೀತಿಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಸೂಕ್ಷ್ಮ ಪ್ರದೇಶಗಳಾದ ಕರಾವಳಿ, ಮಂಗಳೂರು, ಮತ್ತು ಉತ್ತರ ಕನ್ನಡದಲ್ಲಿ ಹೆಚ್ಚಿನ ಸಂಖ್ಯೆಯ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಇದರ ಜೊತೆಗೆ, ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಫೇಕ್ ನ್ಯೂಸ್‌ಗೆ ಕಡಿವಾಣ ಹಾಕಲು ತಾಂತ್ರಿಕ ಕ್ರಮಗಳ ಕುರಿತು ಚರ್ಚಿಸಲು ಸಭೆ ಕರೆಯಲಾಗಿದೆ ಎಂದು ತಿಳಿಸಿದ್ದಾರೆ.

RelatedPosts

ನಾಳೆ ಬೆಂಗಳೂರಿನಲ್ಲಿ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂಗೆ ಸಿಎಂ ಚಾಲನೆ: ಏನಿದರ ವಿಶೇಷತೆಗಳು?

ಕಾಕ್ರೋಚ್ ಪಕ್ಷದಿಂದ ಮಾನವ ಸರಪಳಿ ಕರೆ: ಪೋಸ್ಟ್ ಶೇರ್ ಮಾಡಿದ್ರೆ ಬೀಳುತ್ತೆ ಕೇಸ್! ಪೊಲೀಸರಿಂದ ಎಚ್ಚರಿಕೆ

ದುಬಾರೆ ಆನೆ ಶಿಬಿರ ದುರಂತ: ಇಬ್ಬರು ಅಧಿಕಾರಿಗಳ ವಿರುದ್ಧ ಕೇಸ್‌ ದಾಖಲು

ಕರ್ನಾಟಕದಲ್ಲಿ ಮುಂದಿನ ಒಂದು ವಾರ ಗುಡುಗು, ಸಿಡಿಲು ಸಹಿತ ಭಾರೀ ಮಳೆ ಮುನ್ಸೂಚನೆ

ADVERTISEMENT
ADVERTISEMENT

ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, “ಕಾನೂನು ಸುವ್ಯವಸ್ಥೆಗಿಂತ ಯುದ್ಧ ಭೀತಿಯೇ ಈಗ ದೊಡ್ಡ ಸವಾಲಾಗಿದೆ. ಗಡಿಯಲ್ಲಿ ಉಗ್ರರ ವಿರುದ್ಧ ಸೇನೆ ಕಾರ್ಯಾಚರಣೆ ನಡೆಸುತ್ತಿದೆ. ಈ ಪರಿಸ್ಥಿತಿ ಉಲ್ಬಣಗೊಂಡರೆ ಯುದ್ಧದ ಸನ್ನಿವೇಶ ಬರಬಹುದು. ಕೇಂದ್ರ ಸರ್ಕಾರದ ಸೂಚನೆಯಂತೆ, ರಾಜ್ಯದಲ್ಲಿ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ,” ಎಂದು ಹೇಳಿದರು. ರಾಜ್ಯದ ಪ್ರತಿಯೊಂದು ನಗರ ಮತ್ತು ಪಟ್ಟಣದಲ್ಲಿ ಜಾಗೃತಿ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕರಾವಳಿ ಪ್ರದೇಶಗಳಲ್ಲಿ ವಿಶೇಷವಾಗಿ ಬಿಗಿ ಭದ್ರತೆಯನ್ನು ಒದಗಿಸಲಾಗಿದ್ದು, ನೌಕಾಪಡೆಯೂ ಸಹಕರಿಸುತ್ತಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಜೆ 4 ಗಂಟೆಗೆ ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಗೃಹ ಇಲಾಖೆ, ಕಂದಾಯ ಇಲಾಖೆ, ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. “ಯುದ್ಧ ಸನ್ನಿವೇಶ ಬಂದರೆ, ನೀರು, ಆಹಾರ ಧಾನ್ಯ, ಆಸ್ಪತ್ರೆ ಸೌಲಭ್ಯಗಳಿಗೆ ಸಂಬಂಧಿಸಿದ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಕೇಂದ್ರದಿಂದ ಹೊಸ ಸೂಚನೆಗಳು ಬಂದಿದ್ದರೆ, ಅವುಗಳ ಬಗ್ಗೆಯೂ ಚರ್ಚಿಸುತ್ತೇವೆ,” ಎಂದು ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟಪಡಿಸಿದರು.

ಪೊಲೀಸ್ ಸಿಬ್ಬಂದಿಗೆ ರಜೆ ನಿರಾಕರಿಸಲಾಗಿದೆ. “ಪರಿಸ್ಥಿತಿ ಸೂಕ್ಷ್ಮವಾಗಿರುವುದರಿಂದ, ಪೊಲೀಸರಿಗೆ ಯಾವುದೇ ರಜೆ ಮಂಜೂರು ಮಾಡುವುದಿಲ್ಲ. ಕೇಂದ್ರ ಸರ್ಕಾರವು ಪರಿಸ್ಥಿತಿ ಸಾಮಾನ್ಯವಾಗಿದೆ ಎಂದು ತಿಳಿಸುವವರೆಗೆ ಎಚ್ಚರಿಕೆಯಿಂದ ಇರಬೇಕು,” ಎಂದು ಅವರು ಒತ್ತಿ ಹೇಳಿದರು. ಕರಾವಳಿಯ ಮಂಗಳೂರು ಮತ್ತು ಉತ್ತರ ಕನ್ನಡದಂತಹ ಪ್ರದೇಶಗಳಲ್ಲಿ ವಿಶೇಷ ಜಾಗೃತೆ ವಹಿಸಲಾಗಿದೆ. ಗಡಿಯ ಒಳಗಿನ ಭದ್ರತೆಯನ್ನು ರಾಜ್ಯ ಪೊಲೀಸ್ ಇಲಾಖೆ ನಿರ್ವಹಿಸುತ್ತಿದ್ದು, ಕೇಂದ್ರದಿಂದ ಯಾವುದೇ ಹೆಚ್ಚಿನ ಮಾಹಿತಿ ಬಂದರೆ ಅದನ್ನು ಪರಿಗಣಿಸಲಾಗುವುದು.

ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹರಡುವಿಕೆಯನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲಾಗುತ್ತಿದೆ. “ಫೇಕ್ ನ್ಯೂಸ್‌ನಿಂದ ಜನರಲ್ಲಿ ಗೊಂದಲ ಮತ್ತು ಭಯ ಸೃಷ್ಟಿಯಾಗುತ್ತಿದೆ. ಹಳೆಯ ವಿಡಿಯೋಗಳನ್ನು ತಪ್ಪುಗೊಳಿಸಿ, ಪ್ರಚೋದನಾಕಾರಿ ವಿಷಯವನ್ನು ಹಂಚಿಕೊಳ್ಳಲಾಗುತ್ತಿದೆ. ಈ ಬಗ್ಗೆ ಐಎಸ್‌ಡಿ ಮತ್ತು ಐಟಿ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಮಧ್ಯಾಹ್ನ ಸಭೆ ನಡೆಸಿ, ತಾಂತ್ರಿಕ ಕ್ರಮಗಳನ್ನು ಚರ್ಚಿಸುತ್ತೇವೆ,” ಎಂದು ಗೃಹ ಸಚಿವ ಜಿ. ಪರಮೇಶ್ವರ್  ವಿವರಿಸಿದರು.

ರಾಜ್ಯವು ಯಾವುದೇ ತುರ್ತು ಸನ್ನಿವೇಶವನ್ನು ಎದುರಿಸಲು ಸಿದ್ಧವಾಗಿದೆ. “ಆಹಾರ ಧಾನ್ಯ, ನೀರು, ಆಸ್ಪತ್ರೆ ಸೌಲಭ್ಯಗಳ ಸಿದ್ಧತೆಯನ್ನು ಪೂರ್ಣಗೊಳಿಸಿದ್ದೇವೆ. ಆದರೆ, ಪ್ರಸ್ತುತ ಯುದ್ಧದಂತಹ ಸನ್ನಿವೇಶ ಇಲ್ಲ. ಇದು ಕೇವಲ ಮುನ್ನೆಚ್ಚರಿಕೆಯ ಕ್ರಮವಷ್ಟೇ,” ಎಂದು ಅವರು ಒತ್ತಿ ಹೇಳಿದರು. ಕರ್ನಾಟಕದ ಜನತೆಗೆ ಭಯಬೀಳದಂತೆ ಸರ್ಕಾರವು ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಭರವಸೆ ನೀಡಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 05 22T234209.872

IPL 2026: SRH ವಿರುದ್ಧ ಸೋತರೂ ಅಗ್ರಸ್ಥಾನ ಉಳಿಸಿಕೊಂಡ ಆರ್‌ಸಿಬಿ!

by ಶಾಲಿನಿ ಕೆ. ಡಿ
May 22, 2026 - 11:42 pm
0

Untitled design 2026 05 22T232140.941

ನಾಳೆ ಬೆಂಗಳೂರಿನಲ್ಲಿ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂಗೆ ಸಿಎಂ ಚಾಲನೆ: ಏನಿದರ ವಿಶೇಷತೆಗಳು?

by ಶಾಲಿನಿ ಕೆ. ಡಿ
May 22, 2026 - 11:23 pm
0

Untitled design 2026 05 22T224625.857

ಬಿಕಿನಿಯಲ್ಲಿ ‘ಕಾಂತಾರ’ ನಟಿ ರುಕ್ಮಿಣಿ ವಸಂತ್? ವೈರಲ್‌‌ ಆಯ್ತು ಹಾಟ್‌ ಫೋಟೋಸ್..!

by ಶಾಲಿನಿ ಕೆ. ಡಿ
May 22, 2026 - 10:50 pm
0

Untitled design 2026 05 22T223400.938

IPL 2026: 256 ಟಾರ್ಗೆಟ್ ನೀಡಿದ SRH: ಕಡಿಮೆ ರನ್‌ ಗಳಿಸಿದ್ರು ಆರ್‌ಸಿಬಿಗೆ ಲಾಭ! ಪ್ಲೇಆಫ್ ಲೆಕ್ಕಾಚಾರ ಏನು?

by ಶಾಲಿನಿ ಕೆ. ಡಿ
May 22, 2026 - 10:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 22T232140.941
    ನಾಳೆ ಬೆಂಗಳೂರಿನಲ್ಲಿ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂಗೆ ಸಿಎಂ ಚಾಲನೆ: ಏನಿದರ ವಿಶೇಷತೆಗಳು?
    May 22, 2026 | 0
  • Untitled design 2026 05 22T212451.892
    ಕಾಕ್ರೋಚ್ ಪಕ್ಷದಿಂದ ಮಾನವ ಸರಪಳಿ ಕರೆ: ಪೋಸ್ಟ್ ಶೇರ್ ಮಾಡಿದ್ರೆ ಬೀಳುತ್ತೆ ಕೇಸ್! ಪೊಲೀಸರಿಂದ ಎಚ್ಚರಿಕೆ
    May 22, 2026 | 0
  • Untitled design 2026 05 22T204202.608
    ದುಬಾರೆ ಆನೆ ಶಿಬಿರ ದುರಂತ: ಇಬ್ಬರು ಅಧಿಕಾರಿಗಳ ವಿರುದ್ಧ ಕೇಸ್‌ ದಾಖಲು
    May 22, 2026 | 0
  • Untitled design 2026 05 22T191859.932
    ಕರ್ನಾಟಕದಲ್ಲಿ ಮುಂದಿನ ಒಂದು ವಾರ ಗುಡುಗು, ಸಿಡಿಲು ಸಹಿತ ಭಾರೀ ಮಳೆ ಮುನ್ಸೂಚನೆ
    May 22, 2026 | 0
  • Untitled design 2026 05 22T175651.041
    ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್ ಮೂಲಕ ಸಂಚು: ಡಿ.ಕೆ ಶಿವಕುಮಾರ್ ಆಕ್ರೋಶ
    May 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version