ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಮೇಲಿಂದ ಜಿಗಿದು ರೋಗಿ ಆತ್ಮಹತ್ಯೆ

Siddu stalin kcr (59)

ಇಂದು ಬೆಳಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಚಿಕಿತ್ಸೆಗೆಂದು ದಾಖಲಾಗಿದ್ದ ರೋಗಿ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹುಬ್ಬಳ್ಳಿ ನಗರದ ನಿವಾಸಿ ಆದರ್ಶ್ ಗುನ್ಕೋಲಿ ಮೃತಪಟ್ಟ ದುರ್ದೈವಿ. ಜ್ವರದ ಹಿನ್ನಲೆ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕೆತ್ಸೆ ಪಡೆಯುತ್ತಿದ್ದ ಯುವಕ ಬೆಳಗ್ಗೆ 4 ಗಂಟೆ ಸುಮಾರಿಗೆ ಆಸ್ಪತ್ರೆಯ ಮೂರನೇ ಮಹಡಿಯ ಕಿಟಕಿ ಮೂಲಕ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನಂತರ ಆತನನ್ನು ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಿವುಡ್​ ಸ್ಟಾರ್ ನಟಿ ಐಶ್ವರ್ಯ ರೈ ಕಾರಿಗೆ ಬಸ್ ಡಿಕ್ಕಿ! ಆಘಾತಕ್ಕೆ ಒಳಗಾಗಿದ್ದ ಫ್ಯಾನ್ಸ್..!

ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಅವರ ಕಾರಿಗೆ ಬಸ್ ಡಿಕ್ಕಿ ಹೊಡೆದ ಘಟನೆ ಮುಂಬೈನಲ್ಲಿ ನಡೆದಿದೆ.ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಈ ವೇಳೆ ಅವರು ಐಶ್ವರ್ಯಾ ರೈ ಕಾರಿನಲ್ಲಿ ಇದ್ದರೋ ಅಥವಾ ಇಲ್ಲವೋ ಎನ್ನುವ ಪ್ರಶ್ನೆ ಮೂಡಿತ್ತು.ನಟಿಯ ಕಾರ್‌ಗೆಬಸ್‌ ಢಿಕ್ಕಿ ಹೊಡೆದಿದ್ದರಿಂದ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.ಈ ವೇಳೆ ಐಶ್ವರ್ಯಾ ರೈ ಅವರ ಬಾಡಿಗಾರ್ಡ್ಸ್ ಸಹ ಕಾರ್‌ನಿಂದ ಹೊರಬಂದಿದ್ದರು ಎಂದು ವರದಿಯಾಗಿದೆ.ಅಪಘಾತದ ಸಮಯದಲ್ಲಿ ನಟಿ ಕಾರಿನಲ್ಲಿ ಇದ್ದಿರಲಿಲ್ಲ ಎಂದು ಮೂಲಗಳು ತಿಳಿಸಿವೆ.

ನಟಿ ಕಾರ್‌ನಿಂದ ಇಳಿಯದೇ ಇದ್ದರೂ ಮುಂಬೈ ಜನರಿಗೆ ಇದು ಐಶ್ವರ್ಯಾ ರೈ ಅವರ 1.5 ಕೋಟಿಯ ಟೊಯೋಟಾ ವೆಲ್‌ಫೈರ್‌ ಕಾರು ಎಂದು ಖಚಿತವಾಗಿ ಹೇಳೋದಕ್ಕೆ ಕಾರಣವಿದೆ. ಐಶ್ವರ್ಯಾ ರೈ ಅವರ ಎಲ್ಲಾ ಕಾರ್‌ನ ನಂಬರ್ ಪ್ಲೇಟ್‌ 5050 ಎನ್ನುವ ನಂಬರ್‌ ಹೊಂದಿದೆ. ಅದೇ ಕಾರಣಕ್ಕಾಗಿ ಇದು ಐಶ್ವರ್ಯಾ ರೈ ಕಾರು ಎಂದು ಗೊತ್ತಾಗಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

 

Exit mobile version