ಸಹಕಾರ ಸಚಿವ ಕೆ.ಎನ್. ರಾಜಣ್ಣ ರಾಜೀನಾಮೆ: ಹೈಕಮಾಂಡ್‌ನ ಒತ್ತಡವೇ ಕಾರಣನಾ?

ಅಧಿಕಾರಕ್ಕಿಂತ ಪಕ್ಷ ಮುಖ್ಯ: ರಾಜಣ್ಣ ಸ್ಪಷ್ಟನೆ!

0 (75)

ಬೆಂಗಳೂರು: ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಸುದ್ದಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಮಹದೇವಪುರ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿರುವುದಾಗಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ರಾಜಣ್ಣ ಅವರ ವಿವಾದಾತ್ಮಕ ಹೇಳಿಕೆ ಹೊರಬಿದ್ದಿತ್ತು. ಈ ಹೇಳಿಕೆ ಪಕ್ಷದ ಹೈಕಮಾಂಡ್‌ಗೆ ಮುಜುಗರ ಉಂಟುಮಾಡಿದ್ದು, ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾಗಿ ವರದಿಯಾಗಿದೆ.

ರಾಜೀನಾಮೆ ವಿಚಾರವಾಗಿ ಮಾತನಾಡಿದ ರಾಜಣ್ಣ, “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಎಲ್ಲವನ್ನೂ ಸ್ಪಷ್ಟಪಡಿಸುತ್ತೇನೆ. ಯಾವ ವಿಚಾರಕ್ಕೆ ಹೈಕಮಾಂಡ್ ಗರಂ ಆಗಿದೆ ಎಂಬುದೇ ನನಗೆ ಗೊತ್ತಿಲ್ಲ. ಪಕ್ಷದ ನಿರ್ಧಾರವೇ ಮುಖ್ಯ. ನಾನು ಅಧಿಕಾರಕ್ಕಾಗಿ ಆಸೆಪಡುವವನಲ್ಲ,” ಎಂದು ಸ್ಪಷ್ಟನೆ ನೀಡಿದರು.

ಇದಕ್ಕೆ ಸಂಬಂಧಿಸಿದಂತೆ ಅವರ ಪುತ್ರ ಹಾಗೂ ವಿಧಾನಪರಿಷತ್ ಸದಸ್ಯ ಎಂಎಲ್‌ಸಿ ರಾಜೇಂದ್ರ ಪ್ರತಿಕ್ರಿಯೆ ನೀಡಿದ್ದು, “ತಂದೆ ರಾಜೀನಾಮೆ ನೀಡುತ್ತಾರೆ ಎಂಬುದು ಸುಳ್ಳು. ಅವರು ಹಾಗೇನೂ ಹೇಳಿಲ್ಲ,” ಎಂದು ವಿವರಿಸಿದ್ದಾರೆ.

Exit mobile version