ರಾಜಣ್ಣ ಸಂಪುಟದಿಂದ ವಜಾ ಬೆನ್ನಲ್ಲೇ ಮಧುಗಿರಿ ಪುರಸಭೆ ಸದಸ್ಯೆ ಗಿರಿಜಾ ರಾಜೀನಾಮೆ!

Your paragraph text (4)

ತುಮಕೂರು: ಕಾಂಗ್ರೆಸ್ ಹೈಕಮಾಂಡ್‌ನ ಸೂಚನೆಯಂತೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸ್ವಪಕ್ಷದ ವಿರುದ್ಧ ಟೀಕೆ ಮಾಡಿದ ಹಿನ್ನೆಲೆಯಲ್ಲಿ ರಾಜಣ್ಣ ಅವರಿಗೆ ರಾಜೀನಾಮೆ ನೀಡುವಂತೆ ಹೈಕಮಾಂಡ್ ಆದೇಶಿಸಿತ್ತು. ರಾಜಣ್ಣ ಅವರ ರಾಜೀನಾಮೆಯ ಬೆನ್ನಲ್ಲೇ, ಮಧುಗಿರಿಯ 10ನೇ ವಾರ್ಡ್‌ನ ಪುರಸಭೆ ಸದಸ್ಯೆ ಗಿರಿಜಾ ಮಂಜುನಾಥ್ ಅವರು ಕೂಡ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಗಿರಿಜಾ ಮಂಜುನಾಥ್, ಕೆ.ಎನ್. ರಾಜಣ್ಣ ಅವರ ಬೆಂಬಲಿಗರಲ್ಲಿ ಒಬ್ಬರಾಗಿದ್ದು, ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿರುವುದಾಗಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. ರಾಜೀನಾಮೆ ಪತ್ರವನ್ನು ಅವರು ಮಧುಗಿರಿಯ ಉಪ ವಿಭಾಗಾಧಿಕಾರಿಗೆ ಸಲ್ಲಿಸಿದ್ದಾರೆ. ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿದ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ರಾಜಣ್ಣ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಸಂದರ್ಭದಲ್ಲಿ, “ನಾನು ಅಸಹಾಯಕನಾಗಿದ್ದೇನೆ. ಹೈಕಮಾಂಡ್ ಆದೇಶವನ್ನು ಪಾಲಿಸಿದ್ದೇನೆ. ನಿಮ್ಮ ಹೇಳಿಕೆಗಳಿಂದ ಪಕ್ಷದ ವರಿಷ್ಠರು ಮುಜುಗರಕ್ಕೆ ಒಳಗಾಗಿದ್ದಾರೆ. ಸಂಪುಟದಿಂದ ಕೈಬಿಡುವುದಕ್ಕಿಂತ ಬೇರೆ ಮಾರ್ಗವಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ಘಟನೆಯಿಂದ ಕಾಂಗ್ರೆಸ್ ಪಕ್ಷದ ಒಳಗಿನ ಕಲಹ ಮತ್ತಷ್ಟು ತೀವ್ರಗೊಂಡಂತಾಗಿದೆ.

Exit mobile version