ಇಸ್ಪೀಟು ಜೂಜಾಟದಲ್ಲಿ ತೊಡಗಿದ್ದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿರುವ ಪೊಲೀಸರು ಏಳು ಜನರನ್ನು ಬಂಧಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಹಣ ಪಣಕ್ಕಿಟ್ಟು ಜೂಜು ಆಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪಿಎಸ್‌ಐ ಜಯರಾಮ್ ನೇತೃತ್ವದ ತಂಡ ದಾಳಿ ನಡೆಸಿದ್ದು, 7 ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನು ಪರಾರಿಯಾದ 5 ಜನರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಬಂಧಿತ ಆರೋಪಿಗಳಿಂದ 64,840 ರೂಪಾಯಿ ಹಣ ಹಾಗೂ ದ್ವಿಚತ್ರವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಸದ್ಯ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.