ಚಿಕ್ಕಮಗಳೂರು: ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕೆಎಸ್ಆರ್‌ಟಿಸಿ ಬಸ್ ಚಾಲಕನೊಬ್ಬ (KSRTC Bus Driver) ಡೆತ್ ನೋಟ್ ಬರೆದಿಟ್ಟು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ.
ಚಂದ್ರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೆಎಸ್ಆರ್‌ಟಿಸಿ ಚಾಲಕ. ಮೇಲಾಧಿಕಾರಿ ಪುಟ್ಟಸ್ವಾಮಿ ವಿರುದ್ಧ ಡೆತ್‌ನೋಟ್ ಬರೆದಿಟ್ಟು ಕಡೂರು ಡಿಪೋದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಹುಷಾರಿಲ್ಲದೇ ಕೆಲಸಕ್ಕೆ ಬಾರದಿದ್ದಕ್ಕೆ ಹಾಜರಾತಿಯಲ್ಲಿ ಗೈರು ಹಾಕಿದ್ದಾರೆ. ನನ್ನ ಖಾತೆಯಲ್ಲಿ ಸಾಕಷ್ಟು ರಜೆ ಇದೆ. ಆದರೂ ಗೈರು ಹಾಕಿದ್ದಾರೆ. ಆದರೆ ಹಣ ಕೊಟ್ಟವರಿಗೆ ಎಷ್ಟು ದಿನ ರಜೆ ಬೇಕಾದರೂ ಕೊಡ್ತಾರೆ ಎಂದು ಎಟಿಎಸ್ ಪುಟ್ಟಸ್ವಾಮಿ ವಿರುದ್ಧ ಆರೋಪ ಮಾಡಿದ್ದಾರೆ.
ಸದ್ಯ ಆತ್ಮಹತ್ಯೆಗೆ ಯತ್ನಿಸಿದ ಚಾಲಕ ಚಂದ್ರುನನ್ನ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಟ್ಟಸ್ವಾಮಿಯಿಂದ ನೌಕರರ ಮೇಲಾಗುತ್ತಿರುವ ದೌರ್ಜನ್ಯ ಸರಿಪಡಿಸುವಂತೆ ಮನವಿ ಮಾಡಿದ್ದಾರೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.