ಸಿಡಿಲು ಬಡಿದು ಇಬ್ಬರು ಸಾವು

Siddu stalin kcr (86)

ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಅನೇಕ ಅವಘಡಗಳು ಸಂಭವಿಸುತ್ತಿವೆ. ಸಿಡಿಲು ಬಡಿದು ಇಬ್ಬರು ರೈತರು ಸಾವಿಗೀಡಾದ ಘಟನೆ ಕೊಪ್ಪಳ ಜಿಲ್ಲೆಯ ಚುಕ್ಕನಕಲ್ ಬಳಿ ನಡೆದಿದೆ.

ಮೃತರನ್ನು ಮಂಜುನಾಥ ಗಾಳಿ (48) ಗೋವಿಂದಪ್ಪ ಮ್ಯಾಗಲಮನಿ (62) ಎಂದು ಗುರುತಿಸಲಾಗಿದೆ. ಇಬ್ಬರೂ ಗುರುವಾರ ಸಂಜೆ ಗ್ರಾಮದ ತೋಟದ ಮನೆಯಲ್ಲಿದ್ದರು. ಈ ವೇಳೆ ಮಳೆ ಬಂದಿದ್ದು, ತೋಟದ ಮನೆಯ ಕಿಟಕಿ ಬಾಗಿಲು ಹಾಕಲು ಹೋದಾಗ ಸಿಡಿಲು ಬಡಿದಿದೆ. ಇದರ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ.

ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ವಿಜಯನಗರದಲ್ಲಿ ಸಿಡಿಲು ಬಡಿದು ಯುವಕ ಸಾವು

ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಸಿಡಿಲು ಬಡಿದು ಯುವಕ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಂಡೆಬಸಾಪುರ ತಾಂಡಾದಲ್ಲಿ ನಡೆದಿದೆ.
ಬಂಡೆಬಸಾಪುರ ಗ್ರಾಮದ ಪಾಂಡುನಾಯ್ಕ್(18) ಮೃತ ಯುವಕ. ಗುರುವಾರ(ಏಪ್ರಿಲ್10) ಸಂಜೆ ಗ್ರಾಮದಲ್ಲಿ ಭಾರೀ ಮಳೆಯಾಗಿದ್ದು, ಮಳೆ ಬರುತ್ತಿದ್ದ ಸಮಯದಲ್ಲಿ ಪಾಂಡುನಾಯ್ಕ್ ಮನೆ ಬಳಿ ನಿಂತಿದ್ದ. ಈ ವೇಳೆ ಸಿಡಿಲು ಬಡಿದು ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸಿಡಿಲಿನ ತೀವ್ರತೆಗೆ ಮನೆಯ ಗೋಡೆಗಳಿಗೆ ಹಾನಿಯಾಗಿದೆ. ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  •  Tata Play-1665

Exit mobile version