ಮಂಡ್ಯ: ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣದ ಬೆನ್ನಲ್ಲೇ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಶಾಂತಿ ಆರಂಭವಾಗಿದೆ. ಆದರೆ, ಈ ಸಭೆಯನ್ನು ಹಿಂದೂ ಮುಖಂಡರು ಬಹಿಷ್ಕರಿಸಿದ್ದಾರೆ. ಎಂದು ತಿಳಿದುಬಂದಿದೆ.
ಇಂದು (ಸ.09) ಮದ್ದೂರಿನ ಕಲ್ಯಾಣ ಮಂಟಪದಲ್ಲಿ ನಡೆದ ಈ ಶಾಂತಿ ಸಭೆಯಲ್ಲಿ ಜಿಲ್ಲಾಧಿಕಾರಿ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದ್ದರು. ಹಿಂದೂ ಮತ್ತು ಮುಸ್ಲಿಂ ಸಮುದಾಯದ ಮುಖಂಡರನ್ನು ಸಭೆಗೆ ಆಹ್ವಾನಿಸಲಾಗಿತ್ತು. ಆದಾಗ್ಯೂ, ಹಿಂದೂ ಮುಖಂಡರು ಈ ಸಭೆಗೆ ಗೈರಾಗಿದ್ದಾರೆ ಎನ್ನಲಾಗ್ತಿದೆ.
ಮದ್ದೂರು ಬಂದ್‌ಗೆ ವ್ಯಾಪಕ ಬೆಂಬಲ
ಹಿಂದೂ ಪರ ಸಂಘಟನೆಗಳು ಈ ಘಟನೆಯನ್ನು ಖಂಡಿಸಿ ಮದ್ದೂರಿನಲ್ಲಿ ಬಂದ್‌ಗೆ ಕರೆ ನೀಡಿದ್ದವು. ಇದಕ್ಕೆ ಸ್ಥಳೀಯರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಮದ್ದೂರು ಪಟ್ಟಣವು ಸಂಪೂರ್ಣ ಸ್ತಬ್ಧವಾಗಿತ್ತು. ವ್ಯಾಪಾರಿಗಳು, ಸ್ಥಳೀಯ ನಿವಾಸಿಗಳು ಮತ್ತು ಇತರ ಸಂಘಟನೆಗಳು ಬಂದ್‌ಗೆ ಸಂಪೂರ್ಣ ಸಹಕಾರ ನೀಡಿದ್ದಾರೆ, ಇದರಿಂದ ಪಟ್ಟಣದ ದೈನಂದಿನ ಚಟುವಟಿಕೆಗಳು ಸ್ಥಗಿತಗೊಂಡಿವೆ.