ಮದ್ದೂರು ಕಲ್ಲು ತೂರಾಟ ಪ್ರಕರಣ: ಶಾಂತಿ ಸಭೆ ಬಹಿಷ್ಕರಿಸಿದ ಹಿಂದೂ ಮುಖಂಡರು

ಬಂದ್‌ನಿಂದ ಸ್ತಬ್ಧವಾದ ಮದ್ದೂರು ಪಟ್ಟಣ!

Untitled design (27)

ಮಂಡ್ಯ: ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣದ ಬೆನ್ನಲ್ಲೇ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಶಾಂತಿ ಆರಂಭವಾಗಿದೆ. ಆದರೆ, ಈ ಸಭೆಯನ್ನು ಹಿಂದೂ ಮುಖಂಡರು ಬಹಿಷ್ಕರಿಸಿದ್ದಾರೆ. ಎಂದು ತಿಳಿದುಬಂದಿದೆ.

ಇಂದು (ಸ.09) ಮದ್ದೂರಿನ ಕಲ್ಯಾಣ ಮಂಟಪದಲ್ಲಿ ನಡೆದ ಈ ಶಾಂತಿ ಸಭೆಯಲ್ಲಿ ಜಿಲ್ಲಾಧಿಕಾರಿ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದ್ದರು. ಹಿಂದೂ ಮತ್ತು ಮುಸ್ಲಿಂ ಸಮುದಾಯದ ಮುಖಂಡರನ್ನು ಸಭೆಗೆ ಆಹ್ವಾನಿಸಲಾಗಿತ್ತು. ಆದಾಗ್ಯೂ, ಹಿಂದೂ ಮುಖಂಡರು ಈ ಸಭೆಗೆ ಗೈರಾಗಿದ್ದಾರೆ ಎನ್ನಲಾಗ್ತಿದೆ.

ಮದ್ದೂರು ಬಂದ್‌ಗೆ ವ್ಯಾಪಕ ಬೆಂಬಲ

ಹಿಂದೂ ಪರ ಸಂಘಟನೆಗಳು ಈ ಘಟನೆಯನ್ನು ಖಂಡಿಸಿ ಮದ್ದೂರಿನಲ್ಲಿ ಬಂದ್‌ಗೆ ಕರೆ ನೀಡಿದ್ದವು. ಇದಕ್ಕೆ ಸ್ಥಳೀಯರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಮದ್ದೂರು ಪಟ್ಟಣವು ಸಂಪೂರ್ಣ ಸ್ತಬ್ಧವಾಗಿತ್ತು. ವ್ಯಾಪಾರಿಗಳು, ಸ್ಥಳೀಯ ನಿವಾಸಿಗಳು ಮತ್ತು ಇತರ ಸಂಘಟನೆಗಳು ಬಂದ್‌ಗೆ ಸಂಪೂರ್ಣ ಸಹಕಾರ ನೀಡಿದ್ದಾರೆ, ಇದರಿಂದ ಪಟ್ಟಣದ ದೈನಂದಿನ ಚಟುವಟಿಕೆಗಳು ಸ್ಥಗಿತಗೊಂಡಿವೆ.

Exit mobile version