ಗಣೇಶ ವಿಸರ್ಜನೆ ಗಲಾಟೆಯಲ್ಲಿ ಲಾಠಿ ಏಟು ತಿಂದ ಮಹಿಳೆ ವಿರುದ್ಧ ಎಫ್‌ಐಆರ್

ಗಣೇಶ ಮೆರವಣಿಗೆ ವೇಳೆ ಪ್ರಚೋದನಾತ್ಮಕ ಘೋಷಣೆ!

Your paragraph text (2)

ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಸೆಪ್ಟೆಂಬರ್ 8ರಂದು ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ, ಲಾಠಿ ಚಾರ್ಜ್‌ಗೆ ಒಳಗಾದ ಮಹಿಳೆ ಜ್ಯೋತಿ ವಿರುದ್ಧ ಮದ್ದೂರು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಜ್ಯೋತಿ, ಮುಸ್ಲಿಂ ಸಮುದಾಯದ ವಿರುದ್ಧ ಪ್ರಚೋದನಾತ್ಮಕ ಘೋಷಣೆಗಳನ್ನು ಕೂಗಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ನಂತರ ಮಾಧ್ಯಮಗಳಿಗೆ ಹೇಳಿಕೆ ನೀಡುವಾಗ ಮುಖ್ಯಮಂತ್ರಿಯವರ ವಿರುದ್ಧ ಅನುಚಿತ ಮತ್ತು ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆ (BNS) ಕಲಂ 196(1)(ಎ) ಮತ್ತು 299 ರ ಅಡಿಯಲ್ಲಿ ಜ್ಯೋತಿ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಘಟನೆಯ ಸಂದರ್ಭದಲ್ಲಿ ಪೊಲೀಸರು ಜ್ಯೋತಿಯ ಮೇಲೆ ಲಾಠಿ ಚಾರ್ಜ್ ನಡೆಸಿದ್ದರು, ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಮದ್ದೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಗಲಾಟೆಯ ಸಂದರ್ಭದಲ್ಲಿ ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಈ ಘಟನೆಯಿಂದ ಮದ್ದೂರು ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು.

Exit mobile version