ಮಂಡ್ಯ: ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುತ್ತಿದ್ದ ವ್ಯಕ್ತಿಗೆ ಹೃದಯಾಘಾತ, ಸಾ*ವು

Untitled design (9)

ಮಂಡ್ಯ: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಜೊತ್ತನಪುರ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ದಾರುಣ ಘಟನೆಯೊಂದು ನಡೆದಿದೆ. ಸಾರಂಗಿ ಗ್ರಾಮದ 50 ವರ್ಷದ ಮಂಜಣ್ಣ ಎಂಬ ವ್ಯಕ್ತಿ, ಗಣೇಶೋತ್ಸವದ ಮೆರವಣಿಗೆಯಲ್ಲಿ ಉತ್ಸಾಹದಿಂದ ನೃತ್ಯ ಮಾಡುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದು, ಹೃದಯಾಘಾತದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗಣೇಶ ಮೂರ್ತಿ ವಿಸರ್ಜನೆಯ ಸಂದರ್ಭದಲ್ಲಿ ನಡೆದ ಈ ಘಟನೆಯ ದೃಶ್ಯವನ್ನು ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಹಿಡಿಯಲಾಗಿದೆ. ಮಂಜಣ್ಣನಿಗೆ ತಕ್ಷಣವೇ ವೈದ್ಯಕೀಯ ಸಹಾಯ ಒದಗಿಸಲು ಯತ್ನಿಸಲಾಯಿತಾದರೂ, ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಈ ಘಟನೆ ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ. ಈ ದುರಂತವು ಗಣೇಶೋತ್ಸವದ ಸಂಭ್ರಮದ ಮಧ್ಯೆ ಗ್ರಾಮದಲ್ಲಿ ದುಃಖದ ಛಾಯೆ ಆವರಿಸಿದೆ.

Exit mobile version