ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ: ದಕ್ಷಿಣ ಕನ್ನಡ ಬಂದ್, ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

02 (3)

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ (VHP) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬಂದ್‌ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಸೇರಿದಂತೆ ಹಲವೆಡೆ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ಖಾಸಗಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.

ನಿಷೇಧಾಜ್ಞೆ ಜಾರಿ

ಮಂಗಳೂರಿನಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ನೀಡಿರುವ ಆದೇಶದಂತೆ,  ಇಂದು ಬೆಳಿಗ್ಗೆ 6 ಗಂಟೆಯಿಂದ ಸಾಯಂಕಾಲ 6 ಗಂಟೆವರೆಗೆ ಭದ್ರತಾ ಕ್ರಮವಾಗಿ ಬಿಎನ್‌ಎಸ್ ಕಲಂ 163 ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

ಮಂಗಳೂರಿನಲ್ಲಿ ನಿಷೇಧಾಜ್ಞೆ

ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ. ಬಿಎನ್​ಎಸ್ ಕಲಂ 163 ಅಡಿಯಲ್ಲಿ ಮೇ 2 ರ ಮುಂಜಾನೆ 6 ಗಂಟೆಯಿಂದ ಮೇ 6 ರ ಮುಂಜಾನೆ 6 ಗಂಟೆ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್‌ ಅಗರ್ವಾಲ್ ಆದೇಶದಲ್ಲಿ ತಿಳಿಸಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಸುಹಾಸ್ ಶೆಟ್ಟಿ ಹತ್ಯೆ ಘಟನೆ

ಮಂಗಳೂರಿನ ಬಜ್ಪೆ ಸಮೀಪದ ಕಿನ್ನಿಪದವು ಪ್ರದೇಶದಲ್ಲಿ ಸುಹಾಸ್ ಶೆಟ್ಟಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿ, ವಿಶ್ವ ಹಿಂದೂ ಪರಿಷತ್ ಆರೋಪಿಸಿದಂತೆ ಈ ಹತ್ಯೆ ಪೂರ್ವ ಯೋಜಿತವಾಗಿದ್ದು, ನಿಷೇಧಿತ ಸಂಘಟನೆ ಪಿಎಫ್‌ಐ (PFI) ಕೈವಾಡವಿದೆ ಎಂದು ದೂರಿದೆ. ಆರೋಪಿಗಳ ವಿರುದ್ಧ ಶೀಘ್ರ ಕ್ರಮ ವಹಿಸಬೇಕು ಎಂಬ ಒತ್ತಾಯದೊಂದಿಗೆ, ಬಂದ್‌ಗೆ ಕರೆ ನೀಡಲಾಗಿದೆ.

ಬಸ್ ಸಂಚಾರ ಸ್ಥಗಿತ

ಖಾಸಗಿ ಬಸ್ ಚಾಲಕರ ಪ್ರಕಾರ, ಕೆಲವೆಡೆ ಬಸ್‌ಗಳಿಗೆ ಕಲ್ಲು ತೂರಾಟವಾಗಿದೆ. ಭದ್ರತೆ ಕೊರತೆ ಕಾರಣದಿಂದ ಇಂದು ಖಾಸಗಿ ಬಸ್‌ಗಳೆಲ್ಲಾ ನಿಲ್ಲಿಸಲ್ಪಟ್ಟಿವೆ. ಇದರಿಂದ ಸಾರ್ವಜನಿಕರು ಪರದಾಡುವ ಸ್ಥಿತಿಯಾಗಿದೆ. ಇತ್ತ, ಅಂಗಡಿಗಳೂ ಮುಚ್ಚಲ್ಪಟ್ಟಿದ್ದು, ವ್ಯಾಪಾರ ವಹಿವಾಟು ಸಂಪೂರ್ಣವಾಗಿ ಸ್ಥಗಿತವಾಗಿದೆ. ಇತ್ತೀಚಿನ ಮಾಹಿತಿಯಂತೆ ಕೆಎಸ್‌ಆರ್‌ಟಿಸಿ (KSRTC) ಬಸ್‌ಗಳು ಮಾತ್ರ ಸಂಚರಿಸುತ್ತಿವೆ.

ಶವಯಾತ್ರೆಗಾಗಿ ಒತ್ತಾಯ

ವಿಶ್ವ ಹಿಂದೂ ಪರಿಷತ್ ಮತ್ತು ಕಾರ್ಯಕರ್ತರು, ಸುಹಾಸ್ ಶೆಟ್ಟಿಯ ಶವವನ್ನು ಮಂಗಳೂರಿನಿಂದ ಬಂಟ್ವಾಳದ ಕಾರಿಂಜದ ಪುಳಿಮಜಲು (ಅವರ ನಿವಾಸ) ತನಕ ಜಾಥಾ ಮೂಲಕ ಸಾಗಿಸಲು ಅನುಮತಿ ಕೋರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮತ್ತಷ್ಟು ಭದ್ರತಾ ಕ್ರಮಗಳನ್ನು ಹೇರಲಾಗಿದೆ.

Exit mobile version