ಭೀಕರ ರಸ್ತೆ ಅಪಘಾತ: ಇಬ್ಬರು ವಿದ್ಯಾರ್ಥಿಗಳು ಸಾ*ವು

Untitled design 2025 04 08t223320.190

ಮಂಗಳೂರು: ಮಂಗಳೂರಿನ ಕೆಪಿಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತವಾಗಿದ್ದು,  ಕೇರಳದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಮತ್ತು ಮತ್ತೊಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತಪಟ್ಟವರು ಶ್ರೀನಿವಾಸ ಕಾಲೇಜಿನಲ್ಲಿ ಹಾಸ್ಪಿಟಲ್ ಮ್ಯಾನೇಜ್ಮೆಂಟ್ ಅಧ್ಯಯನ ಮಾಡುತ್ತಿದ್ದ ಸಂಕೀರ್ತನ್ (23) ಮತ್ತು ಎಜೆ ಡೆಂಟಲ್ ಕಾಲೇಜಿನ ವಿದ್ಯಾರ್ಥಿ ಧನುರ್ವೇಶ್ (19) ಎಂದು ಗುರುತಿಸಲಾಗಿದೆ. ಗಾಯಗೊಂಡ ವಿದ್ಯಾರ್ಥಿ ಸಿಬಿ ಸ್ಯಾಮ್, ಕಾಸರಗೋಡು ನಿವಾಸಿ.

ತಡರಾತ್ರಿ ಸುಮಾರು ಮೂರು ಗಂಟೆಯ ಸಮಯದಲ್ಲಿ, ಈ ಮೂವರು ವಿದ್ಯಾರ್ಥಿಗಳು ಬೈಕ್‌ನಲ್ಲಿ ತ್ರಿಬ್ಬಲ್ ರೈಡ್ ಮಾಡುತ್ತಾ ತೆರಳುತ್ತಿದ್ದರು. ಕೆಪಿಟಿ ವೃತ್ತದ ಬಳಿ, ಬೈಕ್ ಅತಿ ವೇಗದಿಂದ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಸಂಕೀರ್ತನ್ ಮತ್ತು ಧನುರ್ವೇಶ್ ತಕ್ಷಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿಬಿ ಸ್ಯಾಮ್ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆ ಸಂಬಂಧ ಕದ್ರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
Exit mobile version