ಪತ್ರ ಬರೆದು ಪ್ರಿಯತಮನೊಂದಿಗೆ ಯುವತಿ ನಾಪತ್ತೆ

Untitled design (39)

ವರದಿ: ಮೂರ್ತಿ ಬೀರಯ್ಯನಪಾಳ್ಯ ಗ್ಯಾರಂಟಿ ನ್ಯೂಸ್ ನೆಲಮಂಗಲ

ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ಗ್ರಾಮದಲ್ಲಿ ಬಿ.ಕಾಂ ಅಧ್ಯಯನ ಮಾಡುತ್ತಿರುವ ಯುವತಿ ಮೇಘನಾ (22) ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಮನೆಯವರು ಮನೆಯಲ್ಲಿಲ್ಲದ ಸಂದರ್ಭದಲ್ಲಿ ಮೇಘನಾ ತನ್ನ ರೂಂನಲ್ಲಿ ಪತ್ರ ಬರೆದಿಟ್ಟುಕೊಂಡು ಮನೆಬಿಟ್ಟು ಹೊರಟ್ಟಿದ್ದಾರೆ. ಪತ್ರದಲ್ಲಿ “ನಾನು ಒಬ್ಬ ಹುಡುಗನನ್ನು ಪ್ರೀತಿಸುತ್ತಿದ್ದು, ಅವನೊಂದಿಗೆ ಮದುವೆಯಾಗಲು ನಿರ್ಧರಿಸಿದ್ದೇನೆ” ಎಂದು ಉಲ್ಲೇಖಿಸಿದ್ದಾಳೆ. ಆದರೆ, ಅಚ್ಚರಿಯ ಸಂಗತಿ ಏನೆಂದರೆ ಮನೆಯವರಿಗೆ ಹುಡುಗನ ಕುರಿತು ಯಾವುದೇ ಮಾಹಿತಿ ಲಭ್ಯವಿಲ್ಲ.

ಮೇಘನಾಳನ್ನು ಸಂಬಂಧಿಕರು ಹಾಗೂ ಸ್ನೇಹಿತರ ಮನೆಗಳಲ್ಲಿ ಹುಡುಕಿದರೂ ಸಿಕ್ಕಿಲ್ಲ ಎಂದು ಮಾವ ಮಂಜುನಾಥ್ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮಾದನಾಯಕನಹಳ್ಳಿ ಪೊಲೀಸರು, ಯುವತಿಯ ಮೊಬೈಲ್ ಕರೆ ವಿವರಗಳು ಹಾಗೂ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ತನಿಖೆ ಮುಂದುವರೆಸುತ್ತಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರೆಸುತ್ತಿದ್ದು, ಯುವತಿಯನ್ನು ಶೀಘ್ರವೇ ಪತ್ತೆಹಚ್ಚುವ ಸಾಧ್ಯತೆ ಇದೆ ಎಂಬ ನಂಬಿಕೆಯನ್ನ ಠಾಣೆ ಇನ್ಸ್‌ಪೆಕ್ಟರ್ ಮುರಳೀಧರ್ ವ್ಯಕ್ತಪಡಿಸಲಾಗಿದೆ.
ಯುವತಿಯ ಸುರಕ್ಷತೆಗಾಗಿ ಸಾರ್ವಜನಿಕರು ಯಾವುದೇ ಮಾಹಿತಿ ತಿಳಿದಿದ್ದರೆ ಪೊಲೀಸರು ಸಂಪರ್ಕಿಸಲು ಮನವಿ ಮಾಡಲಾಗಿದೆ.

ವರದಿ: ಮೂರ್ತಿ ಬೀರಯ್ಯನಪಾಳ್ಯ ಗ್ಯಾರಂಟಿ ನ್ಯೂಸ್ ನೆಲಮಂಗಲ

| Reported by: ಮೂರ್ತಿ ಬೀರಯ್ಯನಪಾಳ್ಯ ಗ್ಯಾರಂಟಿ ನ್ಯೂಸ್ ನೆಲಮಂಗಲ
Exit mobile version