ಮೈಸೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ನಗರದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸಾಹಿತ್ಯ, ಸಂಸ್ಕೃತಿ ಹಾಗೂ ಶೈಕ್ಷಣಿಕ ಕ್ಷೇತ್ರಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿರುವ ಹಿನ್ನೆಲೆಯಲ್ಲಿ ಅವರ ಮೈಸೂರು ಭೇಟಿ ಕುತೂಹಲ ಮೂಡಿಸಿದೆ.
ಇಂದು ಬೆಳಿಗ್ಗೆ 10.45ರ ಸುಮಾರಿಗೆ ಡಿ.ಕೆ. ಶಿವಕುಮಾರ್ ಅವರು ಮೈಸೂರಿಗೆ ಆಗಮಿಸಲಿದ್ದಾರೆ. ಬಳಿಕ ಊಟಿ ರಸ್ತೆಯಲ್ಲಿರುವ ಜೆಎಸ್ಎಸ್ ಕಾಲೇಜಿನಲ್ಲಿ ಆಯೋಜಿಸಿರುವ ‘ವಿಶ್ವಸಂಸ್ಕೃತಿ ಮಹಾಯಾನ ಗದ್ಯ ಮಹಾಕಾವ್ಯ’ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮಹಾಕಾವ್ಯವನ್ನು ಲೋಕಾರ್ಪಣೆ ಮಾಡುವ ಮೂಲಕ ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕದ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಹಲವು ಗಣ್ಯರು, ಸಾಹಿತಿಗಳು ಹಾಗೂ ಸಾಹಿತ್ಯಾಸಕ್ತರು ಭಾಗವಹಿಸುವ ನಿರೀಕ್ಷೆಯಿದೆ.
ಇನ್ನು ಮಧ್ಯಾಹ್ನದ ಬಳಿಕವೂ ಡಿ.ಕೆ. ಶಿವಕುಮಾರ್ ಅವರ ಕಾರ್ಯಕ್ರಮಗಳು ಮುಂದುವರಿಯಲಿವೆ. ಸಂಜೆ 4 ಗಂಟೆಗೆ ಮೈಸೂರಿನ ಮಾನಸಗಂಗೋತ್ರಿಯಲ್ಲಿರುವ ಸೆನೆಟ್ ಭವನದಲ್ಲಿ ಆಯೋಜಿಸಿರುವ ‘ಚಲಿಸುವ ಬಂಡೆ’ ಕೃತಿ ಬಿಡುಗಡೆ ಸಮಾರಂಭದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಕೃತಿಯನ್ನು ಬಿಡುಗಡೆ ಮಾಡಲಿದ್ದು, ಕಾರ್ಯಕ್ರಮದಲ್ಲಿ ಸಾಹಿತ್ಯ ಕ್ಷೇತ್ರದ ಗಣ್ಯರು ಹಾಗೂ ಆಹ್ವಾನಿತರು ಉಪಸ್ಥಿತರಿರಲಿದ್ದಾರೆ.
ಒಂದೇ ದಿನದಲ್ಲಿ ಎರಡು ಪ್ರಮುಖ ಸಾಹಿತ್ಯಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಡಿ.ಕೆ. ಶಿವಕುಮಾರ್ ಅವರು ಮೈಸೂರಿನ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಚಟುವಟಿಕೆಗಳಿಗೆ ಸಾಕ್ಷಿಯಾಗಲಿದ್ದಾರೆ.
ಸಂಜೆ 5.40ರ ಸುಮಾರಿಗೆ ವಿಶೇಷ ವಿಮಾನದ ಮೂಲಕ ಡಿ.ಕೆ. ಶಿವಕುಮಾರ್ ಅವರು ಮೈಸೂರಿನಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸಲಿದ್ದಾರೆ.





