ಪೆಟ್ರೋಲ್ ಟ್ಯಾಂಕರ್‌ಗೆ ಬಸ್ ಡಿಕ್ಕಿ: ಐವರು ಗಂಭೀರ ಗಾಯ!

Untitled design (94)

ಮೈಸೂರು: ನಂಜನಗೂಡು-ಚಾಮರಾಜನಗರ ಮುಖ್ಯ ರಸ್ತೆಯ ದೊಡ್ಡ ಕವಲಂದೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೃಷ್ಣರಾಜಪುರದ ಎಚ್.ಪಿ. ಪೆಟ್ರೋಲ್ ಬಂಕ್ ಬಳಿ ಕೆಟ್ಟು ನಿಂತಿದ್ದ ಪೆಟ್ರೋಲ್ ಟ್ಯಾಂಕರ್ ಲಾರಿಗೆ ಸಾರಿಗೆ ಬಸ್ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಈ ದುರ್ಘಟನೆಯಲ್ಲಿ ಚಾಲಕ ಸೇರಿದಂತೆ ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕವಲಂದೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ಹೊರವಲಯದ ಬರ್ಜಾನುಕುಂಟೆ ಸಮೀಪದಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಗೌರಿಬಿದನೂರು ನಗರದ ಹರ್ಷ (27) ಮತ್ತು ಕಲ್ಲಿನಾಯಕನಹಳ್ಳಿಯ ಲಂಕೇಶ್ (28) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನೊಬ್ಬ ವ್ಯಕ್ತಿ ದೀಪಕ್ ಗಂಭೀರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮೃತದೇಹಗಳನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆ ಮಂಚೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Exit mobile version