ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಏರ್ ಶೋ: ರಕ್ಷಣಾ ಇಲಾಖೆಯಿಂದ ಗ್ರೀನ್ ಸಿಗ್ನಲ್!

ದಸರಾ ಏರ್ ಶೋಗೆ ರಾಜನಾಥ್ ಸಿಂಗ್ ಅನುಮತಿ!

Untitled design 2025 08 21t113134.599

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಈ ಬಾರಿ ಏರ್ ಶೋ ನಡೆಸಲು ಕೇಂದ್ರ ರಕ್ಷಣಾ ಇಲಾಖೆ ಅನುಮತಿ ನೀಡಿದೆ. ಈ ಸಂಬಂಧ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧನ್ಯವಾದ ಸಲ್ಲಿಸಿದ್ದಾರೆ.

ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಸರ್ಕಾರ ಮತ್ತು ರಾಜ್ಯದ ಜನತೆಯ ಪರವಾಗಿ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ. “ಮೈಸೂರು ದಸರಾ ತನ್ನದೇ ಆದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಹೊಂದಿದೆ.

ಈ ನಾಡಹಬ್ಬವನ್ನು ವೀಕ್ಷಿಸಲು ಲಕ್ಷಾಂತರ ಜನರು ಆಗಮಿಸುತ್ತಾರೆ. ಶ್ರದ್ಧೆ ಮತ್ತು ಭಕ್ತಿಯ ಸಂಕೇತವಾಗಿರುವ ಈ ಉತ್ಸವದಲ್ಲಿ ಏರ್ ಶೋಗೆ ಅನುಮತಿ ನೀಡಿರುವುದಕ್ಕೆ ಧನ್ಯವಾದಗಳು,” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು ದಸರಾ ಉತ್ಸವಕ್ಕೆ ಸಿದ್ಧತೆಗಳು ಈಗಾಗಲೇ ಚುರುಕುಗೊಂಡಿವೆ.

Exit mobile version