ಪಿಎಂ ಮೋದಿ ಅದಿಚುಂಚನಗಿರಿ ಭೇಟಿ: ಶ್ರೀ ಗುರು ಭೈರವೈಕ್ಯ ಮಂದಿರ ಇಂದು ಲೋಕಾರ್ಪಣೆ, ಮಠದಲ್ಲಿ ಸಂಪೂರ್ಣ ಸಿದ್ಧತೆ

BeFunky collage (71)

ಆದಿಚುಂಚನಗಿರಿ ಮಠದ 71ನೇ ಪೀಠಾಧಿಪತಿ ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಗದ್ದುಗೆಯ ಮೇಲೆ ನಿರ್ಮಿಸಲಾಗಿರುವ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಲಿದ್ದಾರೆ.

100 ಕೋಟಿ ರೂಪಾಯಿ ವೆಚ್ಚದಲ್ಲಿ ದ್ರಾವಿಡ ವಾಸ್ತುಶಿಲ್ಪ ಶೈಲಿಯಲ್ಲಿ ನಿರ್ಮಾಣವಾಗಿರುವ ಈ ಮಂದಿರವು ಅದಿಚುಂಚನಗಿರಿ ಮಠದ ಇತಿಹಾಸದಲ್ಲಿ ಒಂದು ಮಹತ್ವದ ಮೈಲುಗಲ್ಲಾಗಿದೆ. ಮಠದ ವತಿಯಿಂದ ಮತ್ತು ಮಂಡ್ಯ ಜಿಲ್ಲಾಡಳಿತದಿಂದ ಈ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಪ್ರಧಾನಿ ಮೋದಿ ಕಾರ್ಯಕ್ರಮದ ವೇಳಾಪಟ್ಟಿ:

ಭದ್ರತಾ ಸಿದ್ಧತೆಗಳು: ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರಕ್ಕೆ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಭಕ್ತರು ಬೆಳಿಗ್ಗೆ 9 ಗಂಟೆಯೊಳಗೆ ಬಿ.ಜಿ.ಎಸ್ ಕ್ರೀಡಾಂಗಣಕ್ಕೆ ಆಗಮಿಸಬೇಕು ಎಂದು ಜಿಲ್ಲಾಡಳಿತ ತಿಳಿಸಿದೆ. ಮೋದಿ ನಿರ್ಗಮನದ ನಂತರ ದೇವಾಲಯ ಮತ್ತು ಮಂದಿರಕ್ಕೆ ಸಾರ್ವಜನಿಕ ಪ್ರವೇಶ ಕಲ್ಪಿಸಲಾಗುತ್ತದೆ.

ವಿಶೇಷ ಉಡುಗೊರೆ: ಪ್ರಧಾನಿ ಮೋದಿಗೆ ಸನ್ಮಾನಿಸಲು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಧರಿಸುತ್ತಿದ್ದ ಮಾದರಿಯ ಪೇಟವನ್ನು ಉಡುಗೊರೆಯಾಗಿ ನೀಡಲು ಸಿದ್ಧತೆ ನಡೆದಿದೆ. ಬನಾರಸ್ ಸೀರೆ ಮತ್ತು ಚಿನ್ನದ ಬಳಕೆಯಿಂದ ತಯಾರಿಸಲಾಗಿರುವ ಈ ಪೇಟದಲ್ಲಿ ಮೈಸೂರಿನ ರಾಜ ಲಾಂಛನ ಗಂಡುಬೇರುಂಡವನ್ನು ಸೇರಿಸಲಾಗಿದೆ.

ಮಠದ ಸಿದ್ಧತೆ: ಇಡೀ ಅದಿಚುಂಚನಗಿರಿ ಕ್ಷೇತ್ರವು ಮಧುವಣಗಿತ್ತಿಯಂತೆ ಅಲಂಕೃತಗೊಂಡಿದೆ. ಮಂದಿರದಲ್ಲಿ ಧಾರ್ಮಿಕ ವಿಧಿ-ವಿಧಾನಗಳು, ಪ್ರಾಣ ಪ್ರತಿಷ್ಠಾಪನೆ ಮತ್ತು ಪೂಜಾ ಕೈಂಕರ್ಯಗಳು ಈಗಾಗಲೇ ಪೂರ್ಣಗೊಂಡಿವೆ. ರಾಜ್ಯದ ಹಲವು ರಾಜಕೀಯ ನಾಯಕರು ಒಂದೇ ವೇದಿಕೆಯಲ್ಲಿ ಸಮಾಗಮಗೊಳ್ಳುವ ಸಾಧ್ಯತೆ ಇದೆ.

ಭದ್ರತಾ ವ್ಯವಸ್ಥೆ: ಯಾವುದೇ ಅಹಿತಕರ ಘಟನೆ ನಡೆಯದಂತೆ 2000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜಿಲ್ಲಾಡಳಿತ ಮತ್ತು ಮಠದ ವತಿಯಿಂದ ಸಕಲ ರೀತಿಯ ಸಿದ್ಧತೆಗಳು ಪೂರ್ಣಗೊಂಡಿವೆ.

ಈ ಕಾರ್ಯಕ್ರಮವು ಅದಿಚುಂಚನಗಿರಿ ಮಠದ ಇತಿಹಾಸದಲ್ಲಿ ಒಂದು ಸುವರ್ಣ ಅಧ್ಯಾಯವಾಗಿ ದಾಖಲಾಗಲಿದೆ. ಭಕ್ತರು ಮತ್ತು ಸಾರ್ವಜನಿಕರು ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳುವ ನಿರೀಕ್ಷೆಯಲ್ಲಿದ್ದಾರೆ.

Exit mobile version