ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಸ್ಥಳದಲ್ಲೇ ಸಾ*ವು

Untitled design 2025 04 18t081931.756

ರಾಯಚೂರು ಜಿಲ್ಲೆ: ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಅಮರಾಪುರ ಗ್ರಾಮದ ಬಳಿ ಶನಿವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ವ್ಯಕ್ತಿಗಳು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಇನ್ನೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ರಾಯಚೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ನಾಗರಾಜ್ (28), ಸೋಮು (38), ನಾಗಭೂಷಣ್ (36), ಮುರಳಿ (38) ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈಲ್ಲದೆ, ವಾಹನ ಚಾಲಕ ಆನಂದ್ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಸ್ಥಳೀಯರ ನೆರವಿನಿಂದ ರಾಯಚೂರಿನ RIMS ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಆತನ ಸ್ಥಿತಿಯನ್ನು ಗಂಭೀರ ಎಂದು ತಿಳಿಸಿದ್ದಾರೆ.

ಮೃತರು ತೆಲಂಗಾಣದ ಹಿಂದೂಪುರದಿಂದ, ಯಾದಗಿರಿ ಜಿಲ್ಲೆಯ ಶಹಪುರದಲ್ಲಿ ನಡೆಯುತ್ತಿರುವ ಕುರಿ ಸಂತೆಗೆ ಹೋಗುತ್ತಿದ್ದರು. ಈ ಮಾರ್ಗದಲ್ಲಿ, ರಾಯಚೂರು ಜಿಲ್ಲೆಯ ಅಮರಾಪುರ ಗ್ರಾಮದ ಬಳಿ ಅತಿವೇಗದಿಂದ ಸಾಗುತ್ತಿದ್ದ  ವಾಹನ ಹಳ್ಳದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ವಾಹನ ಸಂಪೂರ್ಣ ಜಖಂಗೊಂಡಿದೆ.

ಸ್ಥಳೀಯ ಗ್ರಾಮಸ್ಥರು ಅಪಘಾತದ ಸ್ಥಳಕ್ಕೆ ಧಾವಿಸಿ ತಕ್ಷಣದ ನೆರವು ನೀಡಿದ್ದಾರೆ. ಗಂಭೀರ ಗಾಯಗೊಂಡ ಚಾಲಕನನ್ನು ತಕ್ಷಣವೇ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಗಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಭೀಕರ ರಸ್ತೆ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾ*ವು

 

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಈ ಅಪಘಾತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡಾಬಸ್ ಪೇಟೆ ಬಳಿ ಸಂಭವಿಸಿದೆ.

ತುಂಬಾ ವೇಗದಲ್ಲಿ ಸಾಗುತ್ತಿದ್ದ ಕಾರು ಡಾಬಸ್ ಪೇಟೆ ಬಳಿ ನಿಯಂತ್ರಣ ತಪ್ಪಿ ರಸ್ತೆಯ ಮಧ್ಯದ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಿಂದ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಗೋಪಾಲ್, ಅವರ ಪತ್ನಿ ಶಶಿಕಲಾ ಮತ್ತು ಮಗಳು ದೀಪಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರು ಎಲ್ಲರೂ ಒಂದೇ ಕುಟುಂಬದವರು. ಕಾರಿನಲ್ಲಿ ಇದ್ದ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಮೃತರು ಬೆಂಗಳೂರಿನಿಂದ ತುಮಕೂರಿನತ್ತ ನಾಮಕರಣ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಅಪಘಾತದ ತೀವ್ರತೆಯಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯ ನಂತರ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

 
Exit mobile version