RCB ವಿಜಯೋತ್ಸವ ದುರಂತ: IPL ತಂಡಗಳಿಗೆ BCCIನಿಂದ ಮಾರ್ಗಸೂಚಿ

Download (8)

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಐಪಿಎಲ್ ತಂಡಗಳ ವಿಜಯೋತ್ಸವಕ್ಕೆ ಕಠಿಣ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ 2025ರ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ದುರಂತದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಭದ್ರತೆ ಮತ್ತು ಸುರಕ್ಷತೆಯನ್ನು ಖಾತ್ರಿಪಡಿಸಲು ಹಲವು ಕಡ್ಡಾಯ ಕ್ರಮಗಳನ್ನು ಘೋಷಿಸಲಾಗಿದೆ.

2008ರಿಂದ ಆರಂಭವಾದ ಐಪಿಎಲ್‌‌‌‌‌‌‌ನಲ್ಲಿ 18 ವರ್ಷಗಳ ಬಳಿಕ ಆರ್‌ಸಿಬಿ 2025ರಲ್ಲಿ ಮೊದಲ ಬಾರಿಗೆ ಟ್ರೋಫಿ ಗೆದ್ದಿತ್ತು. ಗುಜರಾತ್‌ನ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗೆಲುವು ಸಾಧಿಸಿದ ಮರುದಿನ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಆಯೋಜಿಸಲಾಗಿತ್ತು. ಆದರೆ, ಬೆಂಗಳೂರು ಪೊಲೀಸರು ಮೆರವಣಿಗೆಗೆ ಅನುಮತಿ ನಿರಾಕರಿಸಿದ್ದರೂ, ಕ್ರೀಡಾಂಗಣದ ಒಳಗೆ ನಡೆದ ಕಾರ್ಯಕ್ರಮಕ್ಕೆ 2 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಸೇರಿದ್ದರು. ಈ ಸಂದರ್ಭದಲ್ಲಿ ನಿಯಂತ್ರಣ ಕಳೆದುಕೊಂಡು ಕಾಲ್ತುಳಿತ ಸಂಭವಿಸಿ, 11 ಅಭಿಮಾನಿಗಳು ದಾರುಣವಾಗಿ ಮೃತಪಟ್ಟಿದ್ದರು.

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಆರಂಭದಲ್ಲಿ ಉಚಿತ ಪ್ರವೇಶ ಘೋಷಿಸಿತ್ತಾದರೂ, ಜನಸಂದಣಿ ಹೆಚ್ಚಾದಂತೆ ಪಾಸ್‌ ಕಡ್ಡಾಯಗೊಳಿಸಿತು. ಆದರೆ, ಅಭಿಮಾನಿಗಳ ಒತ್ತಡಕ್ಕೆ ಗೇಟ್‌ ತೆರೆದಾಗ ಕಾಲ್ತುಳಿತ ಉಂಟಾಯಿತು. ಈ ಘಟನೆಗೆ ಆರ್‌ಸಿಬಿ, ಕೆಎಸ್‌ಸಿಎ ಮತ್ತು ಕಾರ್ಯಕ್ರಮ ಆಯೋಜಕ ಡಿಎನ್‌ಎ ಕಂಪನಿಯನ್ನು ಜವಾಬ್ದಾರಿಯಾಗಿ ಮಾಡಲಾಗಿತ್ತು.

ಕಾನೂನು ಕ್ರಮ ಮತ್ತು ತನಿಖೆ
ಈ ದುರಂತದ ಬಳಿಕ ಕರ್ನಾಟಕ ಸರ್ಕಾರ ಕಠಿಣ ಕ್ರಮ ಕೈಗೊಂಡಿತು. ಬೆಂಗಳೂರು ಪೊಲೀಸ್ ಆಯುಕ್ತರು, ಹೆಚ್ಚುವರಿ ಆಯುಕ್ತರು, ಉಪ ಆಯುಕ್ತರು ಮತ್ತು ಎಸಿಪಿಯನ್ನು ಅಮಾನತುಗೊಳಿಸಲಾಯಿತು. ಘಟನೆಯನ್ನು ನ್ಯಾಯಾಂಗ ತನಿಖೆಗೆ ವಹಿಸಲಾಗಿತ್ತು. ಪೊಲೀಸ್ ಅಧಿಕಾರಿಗಳ ಜೊತೆಗೆ ಆರ್‌ಸಿಬಿ, ಕೆಎಸ್‌ಸಿಎ ಮತ್ತು ಡಿಎನ್‌ಎ ಕಂಪನಿಯ ಅಧಿಕಾರಿಗಳನ್ನು ಬಂಧಿಸಲಾಗಿತ್ತು. ಈ ಘಟನೆ ಆರ್‌ಸಿಬಿಯ ಐತಿಹಾಸಿಕ ಗೆಲುವಿನ ಸಂಭ್ರಮಕ್ಕೆ ಕರಾಳ ಛಾಯೆ ಬೀರಿತು.

ಬಿಸಿಸಿಐನ ಹೊಸ ಮಾರ್ಗಸೂಚಿಗಳು
ಬಿಸಿಸಿಐ ಐಪಿಎಲ್ ತಂಡಗಳ ವಿಜಯೋತ್ಸವಕ್ಕೆ ಕಠಿಣ ನಿಯಮಗಳನ್ನು ರೂಪಿಸಿದೆ. ದೇವಜಿತ್ ಸೈಕಿಯಾ, ಬಿಸಿಸಿಐ ಕಾರ್ಯದರ್ಶಿ, ಈ ಕುರಿತು ಮಾಹಿತಿ ನೀಡಿದ್ದಾರೆ. ಮಾರ್ಗಸೂಚಿಗಳು ಈ ಕೆಳಗಿನಂತಿವೆ:

Exit mobile version