ಶಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲ್ಲ: ಸಚಿವ ಎಂ.ಬಿ.ಪಾಟೀಲ್‌ ಸ್ಪಷ್ಟನೆ

Siddu stalin kcr (48)

ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಕನಕಪುರ ರಸ್ತೆ ಅಥವಾ ನೆಲಮಂಗಲ, ಕುಣಿಗಲ್‌ ರಸ್ತೆ ಎರಡರಲ್ಲಿ ಒಂದನ್ನು ಅಂತಿಮಗೊಳಿಸಲು ಕೇಂದ್ರದ ತಂಡ ಪರಿಶೀಲನೆ ನಡೆಸಿದೆ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲು ಆಗುವುದಿಲ್ಲ. ಈ ಕುರಿತು ಸಚಿವ ಡಾ। ಜಿ.ಪರಮೇಶ್ವರ್‌ ಅವರ ಗಮನಕ್ಕೂ ತಂದಿದ್ದೇವೆ. ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರಿನಿಂದ 50 ಕಿ.ಮೀ. ಒಳಗೆ ಮಾಡಬೇಕು. 150 ಕಿ.ಮೀ. ದೂರದಲ್ಲಿ ಮಾಡಿದರೆ ಬೆಂಗಳೂರಿನ ಜನರಿಗೆ ಅನುಕೂಲ ಆಗುವುದಿಲ್ಲ. ಜತೆಗೆ ಯಾವ ಕಂಪನಿಯೂ ಅಲ್ಲಿ ವಿಮಾನ ನಿಲ್ದಾಣ ಮಾಡಲು ಮುಂದೆ ಬರುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಕೇಂದ್ರ ವಿಮಾನಯಾನ ಸಚಿವರೊಂದಿಗೆ ಚರ್ಚಿಸಿದ್ದು, ನಾವು ಕನಕಪುರ ರಸ್ತೆ ಅಥವಾ ನೆಲಮಂಗಲ, ಕುಣಿಗಲ್‌ ರಸ್ತೆಯಲ್ಲಿ ಎರಡು ಕಡೆ ಜಾಗ ಗುರುತಿಸಿದ್ದೇವೆ. ಈ ಬಗ್ಗೆ ವರದಿಯನ್ನು ಕೇಂದ್ರಕ್ಕೆ ನೀಡಿದ್ದೇವೆ. ಕೇಂದ್ರ ವಿಮಾನಯಾನ ಇಲಾಖೆಯ ತಂಡವು ರಾಜ್ಯಕ್ಕೆ ಬಂದಿದ್ದು ಅವರು ಅಧ್ಯಯನ ನಡೆಸಿ ಎಲ್ಲಿ ಹೇಳುತ್ತಾರೋ ಅದೇ ಜಾಗ ಅಂತಿಮವಾಗಲಿದೆ. ಬಳಿಕ ಪ್ರಮುಖ ಕಂಪನಿಯಿಂದ ಸಾಧ್ಯಾಸಾಧ್ಯತೆ ಕುರಿತು ವರದಿ ಪಡೆಯಲಾಗುವುದು. ಬಳಿಕ ಅಂತಿಮವಾಗಿ ವಿಮಾನ ನಿಲ್ದಾಣ ಸ್ಥಳಕ್ಕೆ ಅನುಮೋದನೆ ನೀಡಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

 

Exit mobile version