ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮೊದಲ ಬಲಿ: 54 ವರ್ಷದ ಮಹಿಳೆ ಸಾವು!

BeFunky collage (76)

ಶಿವಮೊಗ್ಗ ಜಿಲ್ಲೆಯಲ್ಲಿ ತೀರ್ಥಹಳ್ಳಿ ತಾಲೂಕು ಕೊನೇರಿಪುರ ಗ್ರಾಮದ 54 ವರ್ಷದ ಮಹಿಳೆ ಮಂಗನ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ  ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮೊದಲ ಬಲಿಯಾಗಿದೆ.

ಆರೋಗ್ಯ ಇಲಾಖೆಯು ಕೆ.ಎಫ್.ಡಿ.ಪರೀಕ್ಷೆ ನಡೆಸಿದ್ದು, ಪರೀಕ್ಷೆಯಲ್ಲಿ  ಮಂಗನ ಖಾಯಿಲೆ ಪ್ರಕರಣಗಳು ಪತ್ತೆಯಾಗಿದು. ಶಿವಮೊಗ್ಗ ಜಿಲ್ಲೆಯಲ್ಲಿ ಈ ಮಹಿಳೆಗೆ ಹಲವು ದಿನಗಳಿಂದ ಕೆಎಫ್‌ಡಿ ಸೋಂಕಿನಿಂದ ಬಳಲುತ್ತಿದ್ದರು. ಅವರನ್ನು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.ಮಹಿಳೆಗೆ ಕೆಎಫ್‌ಡಿ ಪಾಸಿಟಿವ್ ಬಂದಿತ್ತು.

ಶಿವಮೊಗ್ಗ ಮೆಗಾನ್ ಆಸ್ಪತ್ರೆಗೆ ದಾಖಲಿಸಿ ಸುಧಾರಣೆ ಕಾಣದ ಕಾರಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು. ಮತ್ತೆ ಕೆಎಫ್‌ಡಿ ರೋಗದ ಲಕ್ಷಣ ಕಂಡುಬಂದ ಹಿನ್ನೆಲೆ ಪುನಃ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸಂದಿಸದೇ ಮಹಿಳೆ ಮೃತಪಟ್ಟಿದ್ದಾರೆ.

KFD ಒಂದು ವೈರಲ್ ಸೋಂಕು ಆಗಿದ್ದು, ಇದು ಚಿಗಟದಿಂದ ಹರಡುತ್ತದೆ ಮತ್ತು ಮನುಷ್ಯರು ಮತ್ತು ಪ್ರಾಣಿಗಳ ಮೇಲೆ ಈ ಕಾಯಿಲೆ ಪರಿಣಾಮ ಬೀರುತ್ತದೆ. ಇದು ಜ್ವರ, ತಲೆನೋವು, ರಕ್ತಸ್ರಾವದ ತೊಂದರೆಗಳು ಮತ್ತು ಕೆಲವೊಮ್ಮೆ ಸಾವಿಗೂ ಕಾರಣವಾಗುತ್ತದೆ.

Exit mobile version